Download Our App

Follow us

Home » ರಾಷ್ಟ್ರೀಯ » ಆದಾಯ ತೆರಿಗೆದಾರರಿಗೆ ಸಿಹಿ ಸುದ್ದಿ – ಆದಾಯ ತೆರಿಗೆ ಮಿತಿ 7 ಲಕ್ಷಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ..!

ಆದಾಯ ತೆರಿಗೆದಾರರಿಗೆ ಸಿಹಿ ಸುದ್ದಿ – ಆದಾಯ ತೆರಿಗೆ ಮಿತಿ 7 ಲಕ್ಷಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ..!

ನವದೆಹಲಿ : ಲೋಕಸಭೆಯಲ್ಲಿ 2024ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ್ದಾರೆ.

ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್ ನಲ್ಲಿ ಐದು ವರ್ಷದ ಬ್ಲೂ ಪ್ರಿಂಟ್​ ತೆರೆದಿಟ್ಟಿದೆ. 47.66 ಲಕ್ಷ ಕೋಟಿ ಗಾತ್ರದ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿದೆ. ಹಾಗೂ ಕೇಂದ್ರ ಸರ್ಕಾರವು ಆದಾಯ ತೆರಿಗೆ ಮಿತಿಯನ್ನು 7 ಲಕ್ಷಕ್ಕೆ ಹೆಚ್ಚಿಸಿದೆ. ತೆರಿಗೆ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಮೂಲ ಸೌಕರ್ಯಕ್ಕೆ 11.11 ಲಕ್ಷ ಕೋಟಿ ಮೀಸಲಿಟ್ಟಿದ್ದು, 55 ಸಾವಿರ ಉದ್ಯೋಗ ಸೃಷ್ಟಿಯ ಗುರಿಯ ಬಜೆಟ್ ಮಂಡನೆ ಮಾಡಿದ್ದಾರೆ. ರೈತರು, ಮಹಿಳೆಯರು, ಕಾರ್ಮಿಕರ ಪರವಾದ ಬಜೆಟ್ ಮಂಡನೆ ಮಾಡಲಾಗಿದೆ. ಕೃಷಿ ಸಾಲ, ಮಹಿಳಾ ಸ್ವ ಉದ್ಯೋಗ ಸಾಲದ ಮೊತ್ತ ಹೆಚ್ಚಳ ಮಾಡಲಾಗಿದೆ. ಸಚಿವೆ ನಿರ್ಮಲಾ ಅವರು ಎಲ್ಲವುದರ ಬಗ್ಗೆ ಒಂದು ಗಂಟೆ ಕಾಲ ಮಧ್ಯಂತರ ಬಜೆಟ್​ ಮಂಡಿಸಿದ್ದಾರೆ.

ಆದಾಯ ತೆರಿಗೆ ಮಿತಿ 7 ಲಕ್ಷಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ- ಮಧ್ಯಂತರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 2024ನೇ ಸಾಲಿನಲ್ಲಿ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿ ಬದಲಾವಣೆ ಮಾಡದೇ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರ 2022-23ನೇ ಸಾಲಿನ ತೆರಿಗೆ ಪದ್ಧತಿಯನ್ನೇ ಮುಂದುರಿಸಲು ತೀರ್ಮಾನಿಸಿದೆ. ಹಾಲಿ ಇರುವ ತೆರಿಗೆ ಪದ್ಧತಿಯನ್ನೇ ಮುಂದುವರಿಸಲಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. 7 ಲಕ್ಷ ರೂಪಾಯಿ ಆದಾಯ ಇರುವವರಿಗೆ ತೆರಿಗೆ ಇಲ್ಲ. ಅಂದ್ರೆ ಆದಾಯ ತೆರಿಗೆ ಪಾವತಿದಾರರು 7 ರೂಪಾಯಿವರೆಗೂ ವಿನಾಯಿತಿಯನ್ನು ಪಡೆಯಬಹುದು.

ನಾರಿಶಕ್ತಿಗೆ ಹೆಚ್ಚಿನ ಒತ್ತು- ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌  ಅವರು ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ.

ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು.

ಇದನ್ನೂ ಓದಿ : ರಾಜ್ಯಾದ್ಯಂತ ಲೋಕಾಯುಕ್ತ ದಾಳಿ : ಹತ್ತು ಅಧಿಕಾರಿಗಳ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ.. ಏನೆಲ್ಲಾ ವಶಕ್ಕೆ? ಇಲ್ಲಿದೆ ವಿವರ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here