Download Our App

Follow us

Home » ಜಿಲ್ಲೆ » ಒಳ ಹರಿವಿನಲ್ಲಿ ಹೆಚ್ಚಳ : ಇಂದು ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಒಳ ಹರಿವಿನಲ್ಲಿ ಹೆಚ್ಚಳ : ಇಂದು ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಮಂಡ್ಯ : ರಾಜ್ಯದ ಪಶ್ಚಿಮ ಘಟ್ಟ, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ನದಿಗಳಿಗೆ ಮರುಜೀವ ಕೊಟ್ಟಿದೆ. ರಾಜ್ಯದ ಬಹುತೇಕ ನದಿಗಳ ನೀರಿನ ಮಟ್ಟ ಕೂಡ ಹೆಚ್ಚಾಗಿದ್ದು, ಜಲಾಶಯಗಳ ಒಳಹರಿವು ಕೂಡ ಹೆಚ್ಚಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆ ಮುಂದುವರೆದಿದೆ. ಹೀಗಾಗಿ ಕೆಆರ್​ಎಸ್​​ ಡ್ಯಾಂನ ನೀರಿನ ಮಟ್ಟ ದಿನೇ ದಿನೇ ಹೆಚ್ಚುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಮಳೆ ನೀರು ಹರಿದುಬರುತ್ತಿದೆ. ಸದ್ಯ 104.30 ಅಡಿಗೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ತಲುಪಿದೆ.

124.80 ಅಡಿ ಗರಿಷ್ಠ ಮಟ್ಟದ ಅಣೆಕಟ್ಟೆ ಇದಾಗಿದ್ದು, ಡ್ಯಾಂಗೆ 6,146 ಕ್ಯೂಸೆಕ್ ಒಳಹರಿವು ಬರುತ್ತಿದೆ. ಡ್ಯಾಂನಿಂದ ನಾಲೆ, ಕುಡಿಯುವ ನೀರಿಗಾಗಿ 1972 ಕ್ಯೂಸೆಕ್ ಹೊರಕ್ಕೆ ಹರಿಸಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 26.372 ಟಿಎಂಸಿ ನೀರು ಸಂಗ್ರಹವಾಗುತ್ತಿದೆ.

ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 104.30 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 26.372 ಟಿಎಂಸಿ
ಒಳ ಹರಿವು – 6,146 ಕ್ಯೂಸೆಕ್
ಹೊರ ಹರಿವು – 1,972 ಕ್ಯೂಸೆಕ್

ಇದನ್ನೂ ಓದಿ : ED ರೇಡ್​ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೊಂದು ಬಿಗ್​ ರೇಡ್ – 11 ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​​ ಕೊಟ್ಟ ಲೋಕಾಯುಕ್ತ..!

Leave a Comment

DG Ad

RELATED LATEST NEWS

Top Headlines

ಹರ್ಮನ್ ಪಡೆ ಅಬ್ಬರಕ್ಕೆ ಪಾಕ್ ಧೂಳಿಪಟ – ಏಷ್ಯಾಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ..!

ದಂಬುಲ್ಲಾ : ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕ್

Live Cricket

Add Your Heading Text Here