Download Our App

Follow us

Home » ರಾಷ್ಟ್ರೀಯ » ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ..!

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ..!

ನವದೆಹಲಿ : ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ-ಸಡಗರ ರಂಗೇರಿದೆ. ಸ್ವಾತಂತ್ರ್ಯೋತ್ಸವವನ್ನು ದೇಶದ ಮೂಲೆಮೂಲೆಯಲ್ಲೂ ಅದ್ಧೂರಿಯಾಗಿ ಆಚರಣೆ ಮಾಡಲಾಗ್ತಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ.

ನವದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ಈ ಮೂಲಕ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಬಾರಿ ಧ್ವಜಾರೋಹಣ ಮಾಡಿದ ಮೂರನೇ ಪ್ರಧಾನಿ ಎನಿಸಿಕೊಂಡಿದ್ದಾರೆ.

ಸ್ವಾತಂತ್ರ್ಯ ದಿನದ ಭಾಷಣ ಮಾಡಿದ ಅವರು “ಇಂದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ‘ಸ್ವಾತಂತ್ರ್ಯ ಪ್ರೇಮಿಗಳಿಗೆ’ ಗೌರವ ಸಲ್ಲಿಸುವ ದಿನ. ಈ ದೇಶ ಅವರಿಗೆ ಋಣಿಯಾಗಿದೆ. ನಮ್ಮ ಪೂರ್ವಜರ ರಕ್ತ ನಮ್ಮ ದೇಹದಲ್ಲಿದೆ. ಅಂದು ಕೇವಲ 40 ಕೋಟಿ ಜನರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು, ಇಂದು ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಮುನ್ನಡೆದರೆ ಖಂಡಿತವಾಗಿ ನಮ್ಮ ಮುಂದೆ ಬರುವ ಯಾವುದೇ ಸವಾಲನ್ನು ಎದುರಿಸುವ ಶಕ್ತಿ ನಮಗೆ ಬರುತ್ತದೆ ಎಂದು ಹೇಳಿದರು.

ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯ ದಿನ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ಇದನ್ನೂ ಓದಿ : 78ನೇ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರು ಹೈ ಅಲರ್ಟ್ – ಮಾಣೆಕ್​​ ಷಾ ಮೈದಾನ ಸೇರಿ ನಗರದಾದ್ಯಂತ ಖಾಕಿ ಸರ್ಪಗಾವಲು..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here