Download Our App

Follow us

Home » ಕ್ರೀಡೆ » ಚೆಸ್ ಒಲಿಂಪಿಯಾಡ್‌ನಲ್ಲಿ ಅವಳಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ..!

ಚೆಸ್ ಒಲಿಂಪಿಯಾಡ್‌ನಲ್ಲಿ ಅವಳಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ..!

ಹಂಗೇರಿ : ಚೆಸ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತ ಒಲಿಂಪಿಯಾಡ್‌ನಲ್ಲಿ ಚಿನ್ನದ ಪದಕ ಗೆದ್ದು ಬೀಗಿದೆ. ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ 45ನೇ ಚೆಸ್ ಒಲಿಂಪಿಯಾಡ್​ನಲ್ಲಿ ಭಾರತವು ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಏಕಕಾಲದಲ್ಲಿ ಚಾಂಪಿಯನ್ ಆಗಿದ್ದು, ಈ ಮೂಲಕ ಚೆಸ್ ಜಗತ್ತಿನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಡಿ.ಗುಕೇಶ್, ಆರ್.ಪ್ರಗ್ನಾನಂದ್, ಅರ್ಜುನ್ ಎರಿಗೈಸಿ ಸೇರಿದಂತೆ 5 ಆಟಗಾರರನ್ನು ಒಳಗೊಂಡ ಭಾರತ ಪುರುಷರ ತಂಡ ಮುಕ್ತ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ಇನ್ನೊಂದೆಡೆ ತಾನಿಯಾ ಸಚ್‌ದೇವ್, ಆರ್ ವೈಶಾಲಿ, ದಿವ್ಯಾ ದೇಶಮುಖ್ ಅವರಿದ್ದ ಮಹಿಳಾ ತಂಡವೂ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದೆ. ಭಾರತ ಇದೇ ಮೊದಲ ಬಾರಿಗೆ ಎರಡೂ ವಿಭಾಗಗಳಲ್ಲಿ ಚಿನ್ನ ಗೆದ್ದುಕೊಂಡಿದ್ದಲ್ಲದೆ, ಎರಡೂ ಚಿನ್ನವನ್ನು ಏಕಕಾಲದಲ್ಲಿ ಗೆದ್ದುದಾಖಲೆ ಬರೆದಿದೆ.

ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ 45ನೇ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತವನ್ನು ಈಗಾಗಲೇ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು. ಇದು ಅಂತರರಾಷ್ಟ್ರೀಯ ಚೆಸ್ ಫೆಡರೇಶನ್ (FIDE)ನಿಂದ ಆಯೋಜಿಸಲಾದ ಚೆಸ್‌ನ ವಿಶ್ವದ ಅತಿದೊಡ್ಡ ಪಂದ್ಯಾವಳಿಯಾಗಿದ್ದು, ಇದರಲ್ಲಿ ವಿವಿಧ ದೇಶಗಳು ಭಾಗವಹಿಸಿತ್ತು.

ಇನ್ನು ಭಾರತ 2022ರಲ್ಲಿ ಮೊದಲ ಬಾರಿಗೆ ಈ ಪಂದ್ಯಾವಳಿಯನ್ನು ಆಯೋಜಿಸಿತ್ತು. ಆಗ ಭಾರತ, ಮುಕ್ತ ವಿಭಾಗ ಮತ್ತು ಮಹಿಳೆಯರ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿತ್ತು.

ಇದನ್ನೂ ಓದಿ : ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here