ವಿಶಾಖಪಟ್ಟಣಂ : ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡವು ಯಶಸ್ವಿ ಜೈಸ್ವಾಲ್ ಅವರ ದ್ವಿಶತಕದ ನೆರವಿನೊಂದಿಗೆ 10 ವಿಕೆಟ್ ಕಳೆದುಕೊಂಡು 396 ರನ್ಗಳನ್ನು ಬಾರಿಸಿತ್ತು. ಇಂಗ್ಲೆಂಡ್ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 253 ರನ್ಗಳನ್ನು ಗಳಿಸಿ 143 ರನ್‌ಗಳ ಹಿನ್ನಡೆಯನ್ನು ಅನುಭಿಸಿತ್ತು. ಇತ್ತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ಗಿಲ್ ಅವರ ಶತಕದ ನೆರವಿನೊಂದಿಗೆ 255 ರನ್ಗಳಿಸಿತ್ತು. ಈ ಮೂಲಕ ಇಂಗ್ಲೆಂಡ್ ವಿರುದ್ಧ ಭಾರತ ತಂಡವು 398 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು.
399 ರನ್‌ಗಳ ಗುರಿಯನ್ನು ಇಟ್ಟುಕೊಂಡು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್, ನಾಲ್ಕನೇ ದಿನದ ಮಧ್ಯಾಹ್ನದ ವೇಳೆಗೆ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 292 ರನ್ಗಳಿಸಿ ಸೋಲಿಗೆ ಶರಣಾಯ್ತು. ಈ ಮೂಲಕ ಭಾರತ ತಂಡವು 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.
WTC ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಂಕ ಪಟ್ಟಿಯಲ್ಲಿ ಭಾರತ ಈಗ ಎರಡನೇ ಸ್ಥಾನಕ್ಕೆ ಜಿಗಿದೆ. 6 ಪಂದ್ಯಗಳಿಂದ ಭಾರತ 38 ಅಂಕ ಕಲೆ ಹಾಕಿದ್ದರೆ ಆಸ್ಟ್ರೇಲಿಯಾ 10 ಪಂದ್ಯಗಳಿಂದ 66 ಅಂಕ ಕಲೆ ಹಾಕಿ ಮೊದಲ ಸ್ಥಾನ ಪಡೆದಿದೆ.
ಸಂಕ್ಷಿಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್ 396/10
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 253/10
ಭಾರತ ಎರಡನೇ ಇನ್ನಿಂಗ್ಸ್ 255/10
ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 292/10
ಇದನ್ನೂ ಓದಿ : ಹನುಮ ಧ್ವಜ ವಿವಾದ – ಮಂಡ್ಯದಲ್ಲಿ ಬಿಜೆಪಿಯಿಂದ ಮನೆ ಮನೆಗೆ ಧ್ವಜ ವಿತರಣೆ..!