ಶ್ರೀಲಂಕಾದ ರಂಗಿ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಷ್ಯಾಕಪ್ 2024ರ 10ನೇ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನೇಪಾಳ ತಂಡವನ್ನು 82 ರನ್‌ಗಳಿಂದ ಮಣಿಸಿ ಅಜೇಯ ತಂಡವಾಗಿ ಸೆಮಿಫೈನಲ್ ಸುತ್ತಿಗೆ ಎಂಟ್ರಿಕೊಟ್ಟಿದೆ.
ಲೀಗ್ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶಫಾಲಿ ವರ್ಮಾ ಅವರ 81 ರನ್‌ಗಳ ಅಮೋಘ ಅರ್ಧಶತಕದೊಂದಿಗೆ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿತು. 179 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ನೇಪಾಳ ಮಹಿಳೆಯರ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 96 ರನ್ ಗಳಿಸಿ 82 ರನ್‌ಗಳಿಂದ ಸೋಲು ಅನುಭವಿಸಿತು.
ಭಾರತದ ಪರ ಬೌಲಿಂಗ್ನಲ್ಲಿ ಕಮಾಲ್ ಮಾಡಿದ ದೀಪ್ತಿ ಶರ್ಮಾ 4 ಓವರ್‌ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರು. ಅರುಂಧತಿ ರೆಡ್ಡಿ ಮತ್ತು ರಾಧಾ ಯಾದವ್ ತಲಾ 2 ವಿಕೆಟ್ ಪಡೆದರು.
ಇದನ್ನೂ ಓದಿ : ನಟ ದರ್ಶನ್ ಭೇಟಿಗೆ ಅವಕಾಶ ಸಿಗದೆ ಸಾಧುಕೋಕಿಲ ವಾಪಸ್..!