ನವದೆಹಲಿ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ (ಡಿ.26) ನಿಧನರಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರು ‘ನವ ಆರ್ಥಿಕತೆಯ ರೂವಾರಿ’ಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಆಡಳಿತರ ಬಗ್ಗೆ ಕೊಂಡಾಡಿ ಸಂತಾಪ ಸೂಚಿಸಿದ್ದಾರೆ.
ಭಾರತದ ಮಾಜಿ ಪ್ರಧಾನಿಯವರ ನಿಧನದಿಂದ ತೀವ್ರ ದುಃಖವಾಗಿದೆ. ದೇಶ ಮೇರು ನಾಯಕರೊಬ್ಬರನ್ನು ಕಳೆದುಕೊಂಡಿದೆ. ಮನಮೋಹನ್ ಸಿಂಗ್ ದೇಶ ಕಂಡ ಅದ್ಭುತ ಆರ್ಥಿಕ ತಜ್ಞ. ಡಾ. ಮನಮೋಹನ್ ಸಿಂಗ್ಜಿ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕತೆಯನ್ನು ಪುನರ್ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತದ ಪ್ರಗತಿಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾಗಿದ್ದರು. ಮನಮೋಹನ್ ಸಿಂಗ್ ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದರು. ಹಣಕಾಸು ಸಚಿವರಾಗಿ ಸೇರಿ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ದೇಶದ ಆರ್ಥಿಕತೆ ಬೆಳೆಯಲು ಭದ್ರವಾದ ಬುನಾದಿ ಹಾಕಿದ್ದರು . ಅವರ ಜೊತೆ ಸಂಸತ್ತಿನಲ್ಲಿ ಕಳೆದ ದಿನಗಳು ಕಣ್ಣಿಗೆ ಕಟ್ಟಿದಂತಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಮನಮೋಹನ್ ಸಿಂಗ್ರಿಗೆ ಶ್ರದ್ಧಾಂಜಲಿ – ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ ಆಟಗಾರರು..!