ಹುಲುನ್ಬುಯಿರ್ : ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡವು ಚೀನಾದಲ್ಲಿ ನಡೆಯುತ್ತಿರುವ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ತನ್ನ ಅದ್ಭುತ ಪ್ರದರ್ಶನ ಮುಂದುವರೆಸಿದೆ. ಈ ಟೂರ್ನಿಯಲ್ಲಿ ಭಾರತ ಇದುವರೆಗೆ ಆಡಿರುವ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ, ಇಂದು ತನ್ನ ಮುಂದಿನ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ. ಈ ಹೈವೋಲ್ಟೇಜ್ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಈ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಆಡಿರುವ 3 ಪಂದ್ಯಗಳಲ್ಲಿ 2 ಡ್ರಾ ಮತ್ತು 1 ಗೆಲುವಿನೊಂದಿಗೆ 5 ಅಂಕ ಸಂಪಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಈವರೆಗೆ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಪಾಕ್ ವಿರುದ್ದ ಮೇಲುಗೈ ಸಾಧಿಸಿದೆ. ಉಭಯ ತಂಡಗಳು 11 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ 7 ಪಂದ್ಯಗಳನ್ನು ಭಾರತ ಗೆದ್ದಿದ್ದರೆ, 2 ಪಂದ್ಯಗಳನ್ನು ಪಾಕಿಸ್ತಾನ ಗೆದ್ದಿದೆ. ಉಳಿದಂತೆ 2 ಪಂದ್ಯಗಳು ಡ್ರಾ ಆಗಿವೆ.
ಇಂದಿನ ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ವೀಕ್ಷಿಸಬಹುದು? ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಹಾಕಿ ಪಂದ್ಯವು ಸೆಪ್ಟೆಂಬರ್ 14 ರ ಶನಿವಾರ ಮಧ್ಯಾಹ್ನ 1:15 ಕ್ಕೆ ಪ್ರಾರಂಭವಾಗಲಿದೆ. ವೀಕ್ಷಕರು ಇದನ್ನು ಸೋನಿ ಸ್ಪೋರ್ಟ್ಸ್ ಟೆನ್ 1 ಮತ್ತು ಟೆನ್ 1 HD ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು SonyLIV ಅಪ್ಲಿಕೇಶನ್ನಲ್ಲಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಭಯಾನಕ ಕೃತ್ಯ.. ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗಳು..!