Download Our App

Follow us

Home » ಕ್ರೀಡೆ » 4-1 ಅಂತರದಿಂದ ಜಿಂಬಾಬ್ವೆಯನ್ನು ಮಣಿಸಿ ಟಿ20 ಸರಣಿ ಗೆದ್ದ ಭಾರತ..!

4-1 ಅಂತರದಿಂದ ಜಿಂಬಾಬ್ವೆಯನ್ನು ಮಣಿಸಿ ಟಿ20 ಸರಣಿ ಗೆದ್ದ ಭಾರತ..!

ಹರಾರೆ : ನಿನ್ನೆ ಹರಾರೆ ಇಂಟರ್​ ನ್ಯಾಷನಲ್​​ ಸ್ಪೋರ್ಟ್ಸ್ ಕ್ಲಬ್​ನಲ್ಲಿ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಭರ್ಜರಿ ಬ್ಯಾಟಿಂಗ್‌ ಮತ್ತು ಮುಖೇಶ್‌ ಕುಮಾರ್‌ ಅವರ ಬೆಸ್ಟ್‌ ಬೌಲಿಂಗ್ ಬಲದಿಂದ ಜಿಂಬಾಬ್ವೆ ತಂಡದ ಎದುರು ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. 4-1 ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಸರಣಿಯನ್ನು ಇಂಡಿಯಾ ಕೈವಶ ಮಾಡಿಕೊಂಡಿದೆ.

ಕೊನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್​ ಇಂಡಿಯಾ 6 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿತ್ತು. 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ ಟೀಮ್ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ 18.3 ಓವರ್​ಗಳಲ್ಲಿ 125 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಕೊನೇ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್‌ಗಳಿಂದ ಜಿಂಬಾಬ್ವೆಯನ್ನು ಸೋಲಿಸಿದ್ದು, ತಂಡದ ಈ ಗೆಲುವಿನಲ್ಲಿ ಸಂಜು ಸ್ಯಾಮ್ಸನ್ ಮತ್ತು ಮುಖೇಶ್ ಕುಮಾರ್ ಪ್ರಮುಖ ಪಾತ್ರವಹಿಸಿದರು.
ಸಂಜು ಸ್ಯಾಮ್ಸನ್ 45 ಎಸೆತಗಳಲ್ಲಿ 58 ರನ್‌ಗಳ ಕಲೆ ಹಾಕಿದ್ದು, 4 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸಿದರು. ಟೀಮ್ ಇಂಡಿಯಾ ಪರ ಮುಖೇಶ್ ಕೇವಲ 22 ರನ್ ನೀಡಿ 4 ವಿಕೆಟ್ ಪಡೆದರೆ, ದುಬೆ 2 ವಿಕೆಟ್ ಪಡೆದರು. ಉಳಿದ ಬೌಲರ್‌ಗಳು ತಲಾ 1 ವಿಕೆಟ್ ಪಡೆದರು.

ಇದನ್ನೂ ಓದಿ : ಮಂಗಳೂರು : ಅಥೆಂಟಿಕ್ ಓಷನ್ ಟ್ರೆಷರ್​​​ನಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

 

 

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here