Download Our App

Follow us

Home » ಕ್ರೀಡೆ » ಬಾಂಗ್ಲಾ ವಿರುದ್ಧ 2ನೇ ಟೆಸ್ಟ್​ ಗೆದ್ದು ಸರಣಿ ವಶಪಡಿಸಿಕೊಂಡ ಭಾರತ..!

ಬಾಂಗ್ಲಾ ವಿರುದ್ಧ 2ನೇ ಟೆಸ್ಟ್​ ಗೆದ್ದು ಸರಣಿ ವಶಪಡಿಸಿಕೊಂಡ ಭಾರತ..!

ಕಾನ್ಪುರ : ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಅಮೋಘ ಗೆಲುವು ಸಾಧಿಸಿದೆ. 95 ರನ್​ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ ಮೂಲಕ ಭಾರತ 2-0ದಿಂದ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಕಾನ್ಪುರದ ಗ್ರೀನ್ ಪಾರ್ಕ್​ ಸ್ಟೇಡಿಯಂನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ ಬಾಂಗ್ಲಾದೇಶ ಕೇವಲ 146 ರನ್​ಗಳಿಗೆ ಆಲೌಟ್ ಆಗಿತ್ತು. ಇದರಿಂದ ಭಾರತಕ್ಕೆ 95 ರನ್​ಗಳ ಗುರಿ ನೀಡಿತ್ತು. ಈ ಸಾಧಾರಣ ಮೊತ್ತ ಬೆನ್ನತ್ತಿದ ಟೀಮ್ ಇಂಡಿಯಾ ಟೆಸ್ಟ್​ನ ಕೊನೆ ದಿನದಲ್ಲಿ ಗೆದ್ದು ಸಂಭ್ರಮಿಸಿತು.

ರೋಹಿತ್ ಶರ್ಮಾ ಕೇವಲ 8 ರನ್​ಗೆ ಔಟ್ ಆದರು. ಆದರೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅಮೋಘವಾದ ಹಾಫ್​ ಸೆಂಚುರಿ (51) ಸಿಡಿಸಿ ಔಟ್ ಆದರು. ಬಳಿಕ ಬಂದ ವಿರಾಟ್ ಕೊಹ್ಲಿ 29 ರನ್ ಹಾಗೂ ಪಂತ್ 4ರನ್​ ಗಳಿಸುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿತು.

ಇದನ್ನೂ ಓದಿ : ರಣಜಿ ಟ್ರೋಫಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟಿಸಿದ KSCA – ಯಾರಿಗೆಲ್ಲಾ ಚಾನ್ಸ್‌?

Leave a Comment

DG Ad

RELATED LATEST NEWS

Top Headlines

BBK11: ‘ನಿಮ್ಮ ರೀತಿಯ ಫೂಟೇಜ್ ನನಗೆ ಬೇಡ’ – ಮೋಕ್ಷಿತಾ ಖಡಕ್​ ಮಾತಿಗೆ ಜಗದೀಶ್ ಪುಲ್​ ಸೈಲೆಂಟ್..!

ಬಿಗ್‌ ಬಾಸ್‌ ಮನೆ ಈಗ ರಣರಂಗವಾಗಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. 16 ಸ್ಪರ್ಧಿಗಳ ಮಧ್ಯೆ ಒಂಟಿ ಮನೆಯಲ್ಲಿ ಆಟ ಮುಂದುವರಿದಿದೆ. ಮೊದಲ ವಾರ ಯಮುನಾ ಶ್ರೀನಿಧಿ ಎಲಿಮಿನೇಟ್

Live Cricket

Add Your Heading Text Here