Download Our App

Follow us

Home » ಕ್ರೀಡೆ » ಹರಿಣಗಳ ವಿರುದ್ಧ ಸಂಜು ಶತಕದಾಟ.. 61 ರನ್​ಗಳಿಂದ ಮೊದಲ ಟಿ20 ಗೆದ್ದ ಭಾರತ..!

ಹರಿಣಗಳ ವಿರುದ್ಧ ಸಂಜು ಶತಕದಾಟ.. 61 ರನ್​ಗಳಿಂದ ಮೊದಲ ಟಿ20 ಗೆದ್ದ ಭಾರತ..!

ಡರ್ಬನ್‌ : ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಿನ್ನೆ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಸೋಲಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಭಾರತ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.

ಸೂರ್ಯ ಕುಮಾರ್ ನೇತೃತ್ವದ ಟೀಮ್ ಇಂಡಿಯಾ ಎದುರು ತವರಿನಲ್ಲಿ ಹರಿಣಗಳ ಪಡೆ ಮಂಕಾಗಿದೆ. ಟೀಮ್ ಇಂಡಿಯಾ ನೀಡಿದ 203 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆಯಲಿಲ್ಲ. ದಕ್ಷಿಣ ಆಫ್ರಿಕಾ ತಂಡದಲ್ಲಿ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅವರಂತಹ ಸ್ಪೋಟಕ ಬ್ಯಾಟರ್‌ಗಳಿದ್ದರೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇದಕ್ಕೆ ಟೀಮ್ ಇಂಡಿಯಾ ಸ್ಪಿನ್ ಜೋಡಿ ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯಿ ಅವಕಾಶ ನೀಡಲಿಲ್ಲ.

ಟೀಮ್ ಇಂಡಿಯಾ ಸ್ಪಿನ್ ಬಲೆಗೆ ಬಿದ್ದ ಹರಿಣಗಳ ಪಡೆ ಆಲೌಟ್ ಆಗುವ ಮೂಲಕ ಮೊದಲ ಟಿ20 ಪಂದ್ಯ ಸೋತಿದೆ. ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯಿ ತಲಾ 3 ವಿಕೆಟ್ ಪಡೆದು ಮಿಂಚಿದರು. ಇನ್ನು ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಸಖತ್‌ ಆಗಿ ಬೆಂಡೆತ್ತಿರುವ ಸಂಜು ಸ್ಯಾಮ್ಸನ್ ಕೇವಲ 47 ಎಸೆತಗಳಲ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ಸಂಜು ಸ್ಯಾಮ್ಸನ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಟೀಮ್ ಇಂಡಿಯಾವನ್ನು ಕಟ್ಟಿ ಹಾಕುವ ಆಫ್ರಿಕಾನ್ನರ ಪ್ಲಾನ್ ಉಲ್ಟಾ ಹೊಡೆದಿದೆ.

  • ಭಾರತ : 202 – 8 ವಿಕೆಟ್
  • ದಕ್ಷಿಣ ಆಫ್ರಿಕಾ : 141 – ಆಲೌಟ್​

ಇದನ್ನೂ ಓದಿ : ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

Leave a Comment

DG Ad

RELATED LATEST NEWS

Top Headlines

ಶಾಸಕರಿಗೆ ಸಂಕ್ರಾಂತಿ ಗಿಫ್ಟ್‌ : ತಲಾ 10 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ಧರಾಮಯ್ಯ..!

ಬೆಂಗಳೂರು : ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ರೂ. ಅನುದಾನ ಬಿಡುಗಡೆಗೆ ಸಹಿ ಹಾಕಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚೆಗೆ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ

Live Cricket

Add Your Heading Text Here