ಪಾಕಿಸ್ತಾನದ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾವನ್ನು ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳಿಂದ ಗೆದ್ದು ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತೀಯ ಸ್ಟಾರ್ ಸ್ಪಿನ್ನರ್, ವಿಶ್ವದ ನಂ.1 ಟೆಸ್ಟ್ ಬೌಲರ್ ಆರ್ ಅಶ್ವಿನ್ ಅವರ ಆರು ವಿಕೆಟ್‌ಗಳ ನೆರವಿನಿಂದ ಭಾರತ ಬಾಂಗ್ಲಾದೇಶವನ್ನು ಅಲೌಟ್ ಮಾಡಿದೆ. ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದ್ರೆ, ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆದಿದ್ದಾರೆ.
ಇನ್ನು ಉಭಯ ತಂಡಗಳು ಕಾನ್ಪುರದಲ್ಲಿ ಸೆ. 27ರಂದು ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಗ್ರೀನ್ ಪಾರ್ಕ್ ಮೈದಾನ ಆತಿಥ್ಯ ವಹಿಸಲಿದೆ.
2021ರಲ್ಲಿ ಇದೇ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲೂ ಅಶ್ವಿನ್ ಶತಕ ಬಾರಿಸಿ, ಬಳಿಕ ಬೌಲಿಂಗ್‌ನಲ್ಲೂ ಮಿಂಚಿ ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು. ಇದೀಗ ಮತ್ತೊಮ್ಮೆ ತವರು ಪ್ರೇಕ್ಷಕರ ಎದುರು ಮಿಂಚಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದಾರೆ.
ಇದನ್ನೂ ಓದಿ : KMF ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ – ಲಡ್ಡು ವಿವಾದದ ಬೆನ್ನಲ್ಲೇ ಮತ್ತಷ್ಟು ತುಪ್ಪ ಪೂರೈಸುವಂತೆ ಟಿಟಿಡಿ ಮನವಿ..!