Download Our App

Follow us

Home » ಕ್ರೀಡೆ » ಆಂಗ್ಲರ ವಿರುದ್ಧ ಗೆದ್ದು ಬೀಗಿದ ಭಾರತ – ಟಿ20 ವಿಶ್ವಕಪ್​​ ಫೈನಲ್​ಗೆ ಗ್ರ್ಯಾಂಡ್ ​ಎಂಟ್ರಿ..!

ಆಂಗ್ಲರ ವಿರುದ್ಧ ಗೆದ್ದು ಬೀಗಿದ ಭಾರತ – ಟಿ20 ವಿಶ್ವಕಪ್​​ ಫೈನಲ್​ಗೆ ಗ್ರ್ಯಾಂಡ್ ​ಎಂಟ್ರಿ..!

ಗಯಾನಾ : ಗಯಾನಾ ಇಂಟರ್​​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಅಮೋಘ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಭಾರತ ಫೈನಲ್​ಗೇರಿದ ಸಾಧನೆ ಮಾಡಿದೆ. ಇದರ ಜೊತೆಗೆ ಅಜೇಯ ತಂಡವಾಗಿ ಫೈನಲ್​ಗೆ ಲಗ್ಗೆ ಇಟ್ಟಿರುವ ಭಾರತ, ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇದೇ ಇಂಗ್ಲೆಂಡ್ ವಿರುದ್ಧ ಎದುರಿಸಿದ್ದ 10 ವಿಕೆಟ್​ಗಳ ಹೀನಾಯ ಸೋಲಿಗೆ ಸರಿಯಾಗಿ ಸೇಡು ತೀರಿಸಿಕೊಂಡಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತ್ತು.

ಇನ್ನು, ಭಾರತ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಇಂಗ್ಲೆಂಡ್​ ಭಾರತ ತಂಡದ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿತು. ಹಾಗಾಗಿ ಇಂಗ್ಲೆಂಡ್ ತಂಡ 16.4 ಓವರ್​ನಲ್ಲಿ ಕೇವಲ 103 ರನ್​ಗಳಿಗೆ ಆಲೌಟ್​ ಆಗಿದೆ. ಭಾರತ ಪರ ಕುಲ್ದೀಪ್​​ ಯಾದವ್​​, ಅಕ್ಷರ್​ ಪಟೇಲ್​ ತಲಾ 3 ವಿಕೆಟ್​ ತೆಗೆದು ಕಮಾಲ್​ ಮಾಡಿದ್ರು. ಬೂಮ್ರಾ ಕೂಡ 2 ವಿಕೆಟ್​ ತೆಗೆದರು. ಭಾರತ ತಂಡಕ್ಕೆ ಬರೋಬ್ಬರಿ 68 ರನ್​ಗಳ ಜಯ ಸಿಕ್ಕಿದೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here