ಬೆಂಗಳೂರು : 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಭಾಷಣ ಆರಂಭಿಸುತ್ತಲೇ ಕೇಂದ್ರದ ವಿರುದ್ಧ ಕಿಡಿಕಾರಿದ CM ಸಿದ್ದರಾಮಯ್ಯ, ಕರ್ನಾಟಕಕ್ಕೆ 15ನೇ ಹಣಕಾಸಿನ ಆಯೋಗದಲ್ಲಿ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ. ಕೇಂದ್ರದ ಅನುದಾನದ ವಿಚಾರದಲ್ಲಿ ಕರ್ನಾಟಕಕ್ಕೆ ತಾರತಮ್ಯ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಮಹಾರಾಷ್ಟ್ರ ಬಿಟ್ಟರೆ ಹೆಚ್ಚು ತೆರಿಗೆ ಕಟ್ಟುತ್ತಿರೋದು ನಾವೇ. ನಾಲ್ಕು ಲಕ್ಷ ಕೋಟಿಗೂ ಹೆಚ್ಚು ತೆರಿಗೆ ಕರ್ನಾಟಕದಿಂದ ಹೋಗ್ತಿದೆ. ಆದ್ರೆ ನಮಗೆ 1 ರೂಪಾಯಿಯಲ್ಲಿ 13 ಪೈಸೆ ಮಾತ್ರ ನೀಡ್ತಿದ್ದಾರೆ. ಈ ಅನ್ಯಾಯವನ್ನು ನಮ್ಮ ಸಂಸದರು ಒಟ್ಟಾಗಿ ಪ್ರಶ್ನೆ ಮಾಡಬೇಕು. ಕನ್ನಡಿಗರು ನಮ್ಮ ಹಕ್ಕು ಉಳಿಸಿಕೊಳ್ಳಲು ಹೋರಾಡಬೇಕು ಎಂದು ಹೇಳಿದರು.
ನಾವು ರಾಜ್ಯಕ್ಕೆ ನ್ಯಾಯಯುತವಾಗಿ ತೆರಿಗೆ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಯತ್ನ ಮಾಡಬೇಕಾಗಿದೆ. ರಾಜ್ಯದಿಂದ ಆಯ್ಕೆಯಾದ ಎಂಪಿಗಳು ಲೋಕಸಭೆಯಲ್ಲಿ ಧ್ವನಿ ಎತ್ತಬೇಕಿದೆ. ರಾಜ್ಯಸಭಾ ಸದಸ್ಯರೂ ತೆರಿಗೆ ಪಾಲು ಕೊಡಿ ಎಂದು ಕೇಳಬೇಕು. ಆ ರೀತಿಯ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇನ್ನು, ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ಮತ್ತು ಕನ್ನಡಿಗರ ಅವಹೇಳನ ಮಾಡುವುದು, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ – ಪ್ರಧಾನಿ ಮೋದಿಗೆ ಬಿಜೆಪಿ ಶಾಸಕ ಯತ್ನಾಳ್ ಪತ್ರ..!