ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಶಾಸಕ ಮುನಿರತ್ನ ಮಾಡಿರೋ ಹನಿಟ್ರ್ಯಾಪ್ಗೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಸಹಕಾರ ನೀಡಿರುವ ಆರೋಪದ ಮೇಲೆ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರ ಬಂಧನದ ಬಗ್ಗೆ ಎಸ್ಐಟಿ ಮೂಲಗಳು ಖಚಿತ ಪಡಿಸಿದೆ. ಪೀಣ್ಯ, ನಂದಿನಿ ಲೇಔಟ್, ಕಬ್ಬನ್ ಪಾರ್ಕ್, ರಾಜಗೋಪಾಲ್ ನಗರ ಇನ್ಸ್ಪೆಕ್ಟರ್ ಆಗಿದ್ದ ಅಯ್ಯಣ್ಣ ರೆಡ್ಡಿ ಸದ್ಯ ಹೆಬ್ಬುಗೋಡಿ ಠಾಣೆ ಇನ್ಸ್ಪೆಕ್ಟರ್ ಆಗಿದ್ದಾರೆ. ಅವರು ಮುನಿರತ್ನ ಕ್ಷೇತ್ರದಲ್ಲಿ ಅತಿ ಹೆಚ್ಚು ಕೆಲಸ ಮಾಡಿದ್ದರು.
ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಪ್ರಕರಣ ಸಂಬಂಧ ಅಕ್ಟೋಬರ್ 15ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. ಕಗ್ಗಲೀಪರ ಪೊಲೀಸ್ ಠಾಣೆಯಲ್ಲಿ ಸುಮಾರು 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕರ ಮೇಲೆ ಎಫ್ಐಆರ್ ದಾಖಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವರ್ಗಾವಣೆ ಮಾಡಿದ್ದು, ಇದೀಗ ಈ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟ ಸ್ಫರ್ಧಿಗಳು..!