ದೀಪಾವಳಿಗೆ ದರ್ಶನ್ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿದ್ದ ದರ್ಶನ್‌ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್‌ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಇದೇ ವಿಚಾರವಾಗಿ ಚಿಕಿತ್ಸೆಗೆಂದು ದರ್ಶನ್ ಪರ ವಕೀಲರು ಬೇಲ್ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ಹೈಕೋರ್ಟ್ ಇದೀಗ 6 ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಿದೆ.
ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್‌ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ, ಅವರು ಮುಂದಿನ ಆರು ವಾರಗಳನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ.
ದರ್ಶನ್ ಅವರಿಗೆ ಜಾಮೀನು ನೀಡಿದ ಬಳಿಕ ಕೋರ್ಟ್ ಕೆಲವು ಷರತ್ತುಗಳನ್ನು ಹಾಕಿದೆ. ದರ್ಶನ್ ಇಷ್ಟಪಟ್ಟ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಅಲ್ಲದೆ, ಒಂದು ವಾರಗಳಲ್ಲಿ ಚಿಕಿತ್ಸೆಯ ವಿವರವನ್ನು ದರ್ಶನ್ ಕೋರ್ಟ್ಗೆ ಸಲ್ಲಿಕೆ ಮಾಡಬೇಕಿದೆ. ಇನ್ನು ಈ ರೀತಿಯ ಪ್ರಕರಣದಲ್ಲಿ ಹೊರ ಬಂದ ಬಳಿಕ ಆರೋಪಿಗಳು ವಿದೇಶಕ್ಕೆ ಹಾರುವ ಸಾಧ್ಯತೆ ಇರುತ್ತದೆ. ಹೀಗಾಗಿ ಪಾಸ್ಪೋರ್ಟ್ನ್ನು ಸರೆಂಡರ್ ಮಾಡಬೇಕೆಂದು ಬೇಲ್ ಆದೇಶದಲ್ಲಿ ದರ್ಶನ್‌ಗೆ ಕೋರ್ಟ್ ಸೂಚನೆ ನೀಡಿದೆ.
ದರ್ಶನ್ ಬೇಲ್ ಷರತ್ತುಗಳು
- ಪಾಸ್ಪೋರ್ಟ್ ಸರಂಡರ್ ಮಾಡಬೇಕು
- 2 ಲಕ್ಷ ರೂಪಾಯಿ ಬಾಂಡ್ ಪೇಪರ್
- ಇಬ್ಬರ ಶ್ಯೂರಿಟಿ ನೀಡಬೆಕು
- ಸಾಕ್ಷಿ ಮೇಲೆ ಪ್ರತ್ಯಕ್ಷ, ಪರೋಕ್ಷ ಬೆದರಿಕೆ ಹಾಕಬಾರದು
- ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
- ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
- ಸಾಕ್ಷಿಗಳ ಸಂಪರ್ಕ ಮಾಡಬಾರದು
- ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು
ಇದನ್ನೂ ಓದಿ : ದರ್ಶನ್‌ಗೆ ದೀಪಾವಳಿ ಸಿಹಿ.. ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್..!