ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಇಂದು ಸಲ್ಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯಿಸಿದ್ದಾರೆ.
ಚಾರ್ಜ್‌ಶೀಟ್ ಸಲ್ಲಿಕೆ ನಂತರ ಮಾತನಾಡಿದ ಕಮಿಷನರ್ ಬಿ.ದಯಾನಂದ್ ಅವರು, ರೇಣುಕಾಸ್ವಾಮಿ ಕೇಸ್ನಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗಿದೆ. ಕೋರ್ಟ್ನಲ್ಲಿ ತ್ವರಿತ ಗತಿಯ ವಿಚಾರಣೆ ಮಾಡಲು ಮನವಿ ಮಾಡ್ತೇವೆ ಎಂದಿದ್ದಾರೆ.
ಸರ್ಕಾರಿ ಅಧಿಕಾರಿಗಳನ್ನೂ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲಾಗಿದೆ. ಒಟ್ಟು 231 ಸಾಕ್ಷಿದಾರರನ್ನ ಉಲ್ಲೇಖ ಮಾಡಲಾಗಿದೆ. ಬೆಂಗಳೂರಿನ FSLನಿಂದ ಎಲ್ಲಾ ವರದಿ ಬಂದಿವೆ. ಹೈದ್ರಾಬಾದ್ CFSLನಲ್ಲಿ ಎಲೆಕ್ಟ್ರಾನಿಕ್ ಡಿವೈಸ್ಗಳ ವರದಿ ಬಂದಿದೆ. ಇನ್ನೂ ಒಂದಷ್ಟು ವರದಿ ಬರುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.
ಇನ್ನು ದರ್ಶನ್ ಮತ್ತವರ ತಂಡದ ವಿರುದ್ಧ ಸಾಕಷ್ಟು ತಾಂತ್ರಿಕ ಸಾಕ್ಷಿ ಸಿಕ್ಕಿವೆ. 17 ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದೇವೆ. 3991 ಪುಟಗಳ ಮಾಹಿತಿಯನ್ನು ಚಾರ್ಜ್ ಶೀಟ್ ಒಳಗೊಂಡಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ತೆರೆಗೆ ಬರಲು ಸಜ್ಜಾದ ‘ಭಗೀರಥ’ – ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ..!