Download Our App

Follow us

Home » ಕ್ರೀಡೆ » ಐಪಿಎಲ್ 17ನೇ ಆವೃತ್ತಿ ಆರಂಭಕ್ಕೆ ವೇದಿಕೆ ಸಜ್ಜು, ಮೊದಲ ಪಂದ್ಯದಲ್ಲಿ ಸಿಎಸ್​ಕೆ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ..!

ಐಪಿಎಲ್ 17ನೇ ಆವೃತ್ತಿ ಆರಂಭಕ್ಕೆ ವೇದಿಕೆ ಸಜ್ಜು, ಮೊದಲ ಪಂದ್ಯದಲ್ಲಿ ಸಿಎಸ್​ಕೆ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ..!

ಚೆನ್ನೈ : ಕ್ರಿಕೆಟ್‌ ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದ್ದು, ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ನ ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಮುಂದಿನ ವೇಳಾಪಟ್ಟಿ ಪ್ರಕಟಿಸುವುದಾಗಿ ಬಿಸಿಸಿಐ ಸ್ಪಷ್ಟಪಡಿಸಿದೆ. 2019ರ ಲೋಕಸಭಾ ಚುನಾವಣೆ ಅವಧಿಯಲ್ಲೂ ಇದೇ ವಿಧಾನ ಅನುಸರಿ ಎರಡು ಹಂತಗಳಲ್ಲಿ ಟೂರ್ನಿಯನ್ನು ನಡೆಸಲಾಗಿತ್ತು.

2024ರ ಐಪಿಎಲ್​ ಟೂರ್ನಿ ಮಾರ್ಚ್​ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಸಿಎಸ್​ಕೆಯ ತವರು ನೆಲ, ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್​ ಸ್ಟೇಡಿಯಂ ಆತಿಥ್ಯ ವಹಿಸಲಿದೆ.​

ಇದನ್ನೂ ಓದಿ : ಗೌರಿ ಶಂಕರ್ ಅಭಿನಯದ ‘ಕೆರೆಬೇಟೆ’ ಸಿನಿಮಾದ ಟ್ರೈಲರ್ ರಿಲೀಸ್.. ಮಲೆನಾಡಿನ ಫ್ಯಾನ್ಸ್ ಫಿದಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here