ಚೆನ್ನೈ : ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದ್ದು, ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ 17 ದಿನಗಳ ಅಂದರೆ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಮುಂದಿನ ವೇಳಾಪಟ್ಟಿ ಪ್ರಕಟಿಸುವುದಾಗಿ ಬಿಸಿಸಿಐ ಸ್ಪಷ್ಟಪಡಿಸಿದೆ. 2019ರ ಲೋಕಸಭಾ ಚುನಾವಣೆ ಅವಧಿಯಲ್ಲೂ ಇದೇ ವಿಧಾನ ಅನುಸರಿ ಎರಡು ಹಂತಗಳಲ್ಲಿ ಟೂರ್ನಿಯನ್ನು ನಡೆಸಲಾಗಿತ್ತು.
2024ರ ಐಪಿಎಲ್ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಸಿಎಸ್ಕೆಯ ತವರು ನೆಲ, ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.
ಇದನ್ನೂ ಓದಿ : ಗೌರಿ ಶಂಕರ್ ಅಭಿನಯದ ‘ಕೆರೆಬೇಟೆ’ ಸಿನಿಮಾದ ಟ್ರೈಲರ್ ರಿಲೀಸ್.. ಮಲೆನಾಡಿನ ಫ್ಯಾನ್ಸ್ ಫಿದಾ..!