Download Our App

Follow us

Home » ಕ್ರೀಡೆ » ಐಪಿಎಲ್ 2024ರ ಸಂಪೂರ್ಣ ವೇಳಾಪಟ್ಟಿ ಪ್ರಕಟ – ಫೈನಲ್​, ಕ್ವಾಲಿಫೈಯರ್, ಎಲಿಮಿನೇಟರ್​ ಪಂದ್ಯ ಯಾವಾಗ? ಇಲ್ಲಿದೆ ವಿವರ..!

ಐಪಿಎಲ್ 2024ರ ಸಂಪೂರ್ಣ ವೇಳಾಪಟ್ಟಿ ಪ್ರಕಟ – ಫೈನಲ್​, ಕ್ವಾಲಿಫೈಯರ್, ಎಲಿಮಿನೇಟರ್​ ಪಂದ್ಯ ಯಾವಾಗ? ಇಲ್ಲಿದೆ ವಿವರ..!

2024ರ ಲೋಕಸಭಾ ಚುನಾವಣೆ ಹಿನ್ನೆಲೆ ಐಪಿಎಲ್​ನ ಮೊದಲಾರ್ಧದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಸಿಸಿಐ, ಇದೀಗ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದಕ್ಕೂ ಮುನ್ನ ಬಿಸಿಸಿಐ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಿತ್ತು. ಇದೀಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾದ ಬಳಿಕ ಬಿಸಿಸಿಐ ಕೂಡ ಐಪಿಎಲ್​ 17ನೇ ಆವೃತ್ತಿಯ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಅದರಂತೆ ಐಪಿಎಲ್ 2024 ರ ಕ್ವಾಲಿಫೈಯರ್ 1 ಮೇ 21 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದರೆ, ಎಲಿಮಿನೇಟರ್ ಪಂದ್ಯ ಕೂಡ ಮೇ 22 ರಂದು ಇದೇ ಮೈದಾನದಲ್ಲಿ ಅಂದರೆ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಎರಡನೇ ಕ್ವಾಲಿಫೈಯರ್ ಪಂದ್ಯ ಮೇ 24 ರಂದು ಚೆನ್ನೈನಲ್ಲಿ ನಡೆಯಲಿದ್ದು, ಫೈನಲ್ ಪಂದ್ಯಕ್ಕೂ ಇದೇ ಮೈದಾನ ಅಂದರೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಮೇ 26ರ ಭಾನುವಾರದಂದು ಆತಿಥ್ಯವಹಿಸಲಿದೆ.

 

ಮೇ 19 ರಂದು ಲೀಗ್ ಸುತ್ತು ಅಂತ್ಯ

ಮೊದಲ ಹಂತದಲ್ಲಿ ಏಪ್ರಿಲ್ 7 ರವರೆಗಿನ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಇದೀಗ ಏಪ್ರಿಲ್ 8 ರಿಂದ ಮೇ 26 ರವರೆಗಿನ ಪ್ರತಿ ಪಂದ್ಯದ ವಿವರ ಹೊರಬಿದ್ದಿದೆ. ಏಪ್ರಿಲ್ 8 ರಂದು ಚೆನ್ನೈನಲ್ಲಿ ಸಿಎಸ್‌ಕೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹಣಾಹಣಿ ನಡೆಯಲಿದೆ. ಲೀಗ್ ಸುತ್ತು ಡಬಲ್ ಹೆಡರ್‌ನೊಂದಿಗೆ ಕೊನೆಗೊಳ್ಳಲಿದೆ. ಲೀಗ್ ಸುತ್ತಿನ ಕೊನೆಯ 2 ಪಂದ್ಯಗಳು ಮೇ 19ರ ಭಾನುವಾರದಂದು ನಡೆಯಲಿವೆ. ಮೊದಲಿಗೆ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೈದರಾಬಾದ್‌ನಲ್ಲಿ ಸೆಣಸಲಿವೆ. ನಂತರ ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದೆ.

ಈ ಬಾರಿ ಐಪಿಎಲ್ ನಲ್ಲಿ ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ : ಬಿಜೆಪಿಯಿಂದ ಕಣಕ್ಕಿಳಿದಿರುವ ಸೆಲೆಬ್ರಿಟಿಗಳು ಯಾರು ಗೊತ್ತಾ?

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here