Download Our App

Follow us

Home » ಕ್ರೀಡೆ » ಇಂದು ಚೆನ್ನೈನಲ್ಲಿ ನೈಟ್‌ ರೈಡರ್ಸ್‌ vs ಸನ್‌ರೈಸರ್ಸ್‌ ಫೈನಲ್ ಹಣಾಹಣಿ – ಯಾರ ಮುಡಿಗೆ ಐಪಿಎಲ್‌ ಕಿರೀಟ?

ಇಂದು ಚೆನ್ನೈನಲ್ಲಿ ನೈಟ್‌ ರೈಡರ್ಸ್‌ vs ಸನ್‌ರೈಸರ್ಸ್‌ ಫೈನಲ್ ಹಣಾಹಣಿ – ಯಾರ ಮುಡಿಗೆ ಐಪಿಎಲ್‌ ಕಿರೀಟ?

ಚೆನ್ನೈ : ಇಂದು 2024ರ ಐಪಿಎಲ್ 17ನೇ ಆವೃತ್ತಿಗೆ​ ತೆರೆ ಬೀಳಲಿದ್ದು, ಐಪಿಎಲ್​ ಮಹಾ ಸಂಗ್ರಾಮದ ಫೈನಲ್ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಮೈದಾನ ಸಜ್ಜಾಗಿದೆ. ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲ ಲಕ್ಷಾಂತರ ಅಭಿಮಾನಿಗಳ ಮನದಲ್ಲಿ ಕಾಡುತ್ತಿದೆ. 17ನೇ ಆವೃತ್ತಿಯ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ಇಂದು ಕೋಲ್ಕತ್ತಾ ನೈಟ್ ರೈಡರ್ಸ್‌ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮಧ್ಯೆ ರೋಚಕ ಕಾದಾಟ ನಡೆಯಲಿದೆ.

ಐಪಿಎಲ್ 2024ರ ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್, ಮತ್ತೊಮ್ಮೆ ರನ್ ಮಳೆ ಹರಿಸಲು ಸಜ್ಜಾಗಿವೆ. ಆದರೆ, ಚೆನ್ನೈನ ನಿಧಾನ ಗತಿಯ ಪಿಚ್ ಉಭಯ ತಂಡಗಳ ಸ್ಫೋಟಕ ಆಟಕ್ಕೆ ಹೇಗೆ ವರ್ತಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್, ನೇರವಾಗಿ ಫೈನಲ್ ಪ್ರವೇಶಿಸಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ. 
ಎರಡೂ ತಂಡಗಳ ಬ್ಯಾಟಿಂಗ್, ಬೌಲಿಂಗ್ ವಿಭಾಗ ಬಲಿಷ್ಟವಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ನಟ-ನಟಿಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.  ಕೆಕೆಆರ್ ತಂಡ 14 ಪಂದ್ಯಗಳಲ್ಲಿ 9 ಪಂದ್ಯವನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಇನ್ನೂ 2 ಪಂದ್ಯ ಮಳೆಗೆ ಬಲಿಯಾಗಿದೆ. ಒಟ್ಟು 20 ಅಂಕಗಳನ್ನು ಗಳಿಸಿ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಎಸ್‌ಆರ್‌ಹೆಚ್ ತಂಡ 14 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು, 5 ಪಂದ್ಯದಲ್ಲಿ ಸೋಲುಂಡಿದೆ. ಒಟ್ಟು 17 ಅಂಕಗಳನ್ನು ಗಳಿಸಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ.

 

 

 

 

 

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here