Download Our App

Follow us

Home » ಕ್ರೀಡೆ » ಇಂದಿನಿಂದ ಐಪಿಎಲ್‌ ಹಬ್ಬ : ಮೊದಲ ಪಂದ್ಯದಲ್ಲಿ ಆರ್​ಸಿಬಿ-ಸಿಎಸ್​ಕೆ ಮುಖಾಮುಖಿ..!

ಇಂದಿನಿಂದ ಐಪಿಎಲ್‌ ಹಬ್ಬ : ಮೊದಲ ಪಂದ್ಯದಲ್ಲಿ ಆರ್​ಸಿಬಿ-ಸಿಎಸ್​ಕೆ ಮುಖಾಮುಖಿ..!

ಚೆನ್ನೈ  : 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಇಂದು ಆರಂಭವಾಗಲಿದ್ದು, ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್​ ಕ್ರೀಡಾಂಗಣದಲ್ಲಿ ಇಂದು ಅದ್ಧೂರಿ ಸಮಾರಂಭದೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ. ಇನ್ನೆರಡು ತಿಂಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಈ ಟೂರ್ನ ರಸದೌತಣ ನೀಡಲಿದೆ.

ಚೆನ್ನೈನ ಚಪಾಕ್​​ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ಬೆಂಗಳೂರು ರಾಯಲ್​​ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್​​​​​ ಕಿಂಗ್ಸ್​ ನಡುವೆ ಮೊದಲ ಕಾದಾಟ ನಡೆಯಲಿದೆ. ರಾತ್ರಿ 8 ಗಂಟೆಗೆ ಎರಡೂ ತಂಡಗಳ ಉದ್ಘಾಟನಾ ಕಾದಾಟ ಜರುಗಲಿದೆ. ಮಹೇಂದ್ರ ಸಿಂಗ್​ ಧೋನಿ ನಾಯಕತ್ವ ತೊರೆದ ನಂತರ ಚೆನ್ನೈಗೆ ಇದು ಮೊದಲ ಪಂದ್ಯ. ರುತು ರಾಜ್​ ಗಾಯಕ್​​​ವಾಡ್​ ಟೀಂ ಲೀಡ್ ಮಾಡಲಿದ್ದಾರೆ. ಆರ್​ಸಿಬಿ ತಂಡವನ್ನು ಪ್ಯಾಫ್​​​ ಡುಪ್ಲಸಿಸ್​ ಮುನ್ನಡೆಸಲಿದ್ದಾರೆ. ಈ ಆವೃತ್ತಿಯಲ್ಲಿ ಒಟ್ಟು 74 ಪಂದ್ಯಗಳಿದ್ದು ಏಪ್ರಿಲ್​​​ 7ರವರೆಗೆ ಮೊದಲ ಹಂತದಲ್ಲಿ 21 ಮ್ಯಾಚ್​ಗಳು ಜರುಗಲಿವೆ. ಲೋಕಸಭೆ ಎಲೆಕ್ಷನ್​​ ಮುಗಿದ ನಂತರ ಎರಡನೇ ಹಂತದಲ್ಲಿ ಉಳಿದ ಪಂದ್ಯಗಳು ಜರುಗಲಿವೆ.

ಚುನಾವಣೆ ಹೊರತಾಗಿಯೂ ಈ ಬಾರಿ ಸಂಪೂರ್ಣ ಐಪಿಎಲ್‌ ಲೀಗ್‌ ಭಾರತದಲ್ಲೇ ಆಯೋಜಿಸುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಮೊದಲ 15 ದಿನಗಳ ಕಾಲ ನಡೆಯಲಿರುವ 21 ಪಂದ್ಯಗಳಿಗೆ ಮಾತ್ರ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಉಳಿದ ಪಂದ್ಯಗಳ ವೇಳಾಪಟ್ಟಿಯೂ ಶೀಘ್ರದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ.

 

ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?

1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
3. ಕೋಲ್ಕತ್ತಾ ನೈಟ್​ ರೈಡರ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
8. ಸನ್​ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
9. ಆರ್‌ಆರ್‌ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್​ ರೈಡರ್ಸ್, ಮಾರ್ಚ್ 29 ಬೆಂಗಳೂರು
11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
12. ಗುಜರಾತ್ ಟೈಟಾನ್ಸ್ vs ಸನ್​ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್​ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
18. ಸನ್​ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ

ಇದನ್ನೂ ಓದಿ : ED ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here