ಕರ್ನಾಟಕದ ಪ್ರಭಾವಿ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಜಿ ಶಾಸಕಿ ಹಾಗೂ ಪತ್ನಿ ಅಂಜಲಿ ನಿಂಬಾಳ್ಕರ್ ಅವರು ಹೇಮಂತ್ ನಿಂಬಾಳ್ಕರ್ ಅವರಿಗೆ ಹುಟ್ಟು ಹಬ್ಬಕ್ಕೆ ಭಾವನಾತ್ಮಕ ಶುಭಕೋರಿದ್ದಾರೆ.
ಅಂಜಲಿ ನಿಂಬಾಳ್ಕರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪತಿ ಹೇಮಂತ್ ನಿಂಬಾಳ್ಕರ್ ಅವರ ಹುಟ್ಟುಹಬ್ಬಕ್ಕೆ ಪೋಸ್ಟ್ ಹಂಚಿಕೊಂಡಿದ್ದಾರೆ. “ಯುವಕರಿಗೆ ಸ್ಫೂರ್ತಿ ನೀಡಲು ದೇವರು ನಿಮಗೆ ಇನ್ನೂ ಆರೋಗ್ಯಕರ ವರ್ಷಗಳನ್ನು ನೀಡಲಿ. ನೀವು ನಮ್ಮ ಕುಟುಂಬದ ಆಧಾರಸ್ತಂಭ. ನಿಮ್ಮ 25 ವರ್ಷಗಳ ವೃತ್ತಿಜೀವನದಲ್ಲಿ ನೀವು ಕೆಲಸ ಮಾಡಿದ ಜಿಲ್ಲೆಗಳಲ್ಲಿ ವಿಶೇಷವಾಗಿ ಯುವಕರನ್ನು ಪ್ರೇರೇಪಿಸುವುದನ್ನು ನಾನು ನೋಡಿದ್ದೇನೆ. ವಿಶೇಷವಾಗಿ ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ನಿಮ್ಮ ಕೆಲಸದ ಹೆಜ್ಜೆಗುರುತುಗಳನ್ನು ಇನ್ನೂ ನೆನಪಿಸಿಕೊಳ್ಳಲಾಗುತ್ತದೆ ಮತ್ತು ಪಾಲಿಸಲಾಗುತ್ತದೆ” ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
1998ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾದ ಹೇಮಂತ್ ನಿಂಬಾಳ್ಕರ್ ಅವರು ಅವರು 2023ರ ಜೂನ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್‌ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ (ಪೂರ್ವ), ಹೆಚ್ಚುವರಿ ಆಯುಕ್ತ (ಆಡಳಿತ) ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ಹೇಮಂತ್ ನಿಂಬಾಳ್ಕರ್ ಅವರು ನಿರ್ವಹಿಸಿದ್ದರು. ಸದ್ಯ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ)ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ : ಹೊಸ ವರ್ಷಕ್ಕೂ ಮುನ್ನ ಇತಿಹಾಸ ಸೃಷ್ಟಿಸಿದ ಇಸ್ರೋ.. ‘ಸ್ಪೆಡೆಕ್ಸ್’ ಮಿಷನ್ ಯಶಸ್ವಿ ಉಡಾವಣೆ..!