ಬಳ್ಳಾರಿ : ಆದಾಯ ಮೀರಿ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾಂಗ್ರೆಸ್ MLA ನಾರಾ ಭರತ್ ರೆಡ್ಡಿ ನಿವಾಸದ ಮೇಲೆ ED ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನಿಂದ ಬಂದ ಐಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ.
ED ಅಧಿಕಾರಿಗಳು ಇಂದು ಬೆಳಗ್ಗೆ 6.30ರ ಸುಮಾರಿಗೆ ಶಾಸಕ ನಾರಾ ಭರತ ರೆಡ್ಡಿ ಮನೆ, ಅವರ ತಂದೆಯ ಕಚೇರಿ, ಅವರ ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಲ್ಕು ತಂಡಗಳಿಂದ ಭರತ್ ರೆಡ್ಡಿ ಮನೆ ಪರಿಶೀಲನೆ ನಡೆಸಲಾಗುತ್ತಿದೆ. ಭರತ್ ರೆಡ್ಡಿ ಸಂಬಂಧಿಕರ ಮನೆಯನ್ನೂ ED ಅಧಿಕಾರಿಗಳು ಜಾಲಾಡುತ್ತಿದ್ದಾರೆ.
ಬಳ್ಳಾರಿ ಪ್ರಭಾವಿ ರಾಜಕಾರಣಿ ಸೂರ್ಯನಾರಾಯಣ ರೆಡ್ಡಿ ಪುತ್ರ ಭರತ್ ರೆಡ್ಡಿಯವರು ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ MLA ಆಗಿದ್ದಾರೆ. MLC ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ಭರತ್ ರೆಡ್ಡಿ ಬಳ್ಳಾರಿ ಜಿಲ್ಲೆಯಲ್ಲಿ ಪ್ರಭಾವಿ ಯುವ ನಾಯಕರಾಗಿದ್ದು, ಸದನದಲ್ಲೇ ಜನಾರ್ದನ ರೆಡ್ಡಿ ವಿರುದ್ಧ ತೊಡೆ ತಟ್ಟಿ ಸುದ್ದಿಯಾಗಿದ್ದರು. ಅಸೆಂಬ್ಲಿ ಎಲೆಕ್ಷನ್ನಲ್ಲಿ ಸೋಮಶೇಖರ್ರೆಡ್ಡಿ, ಲಕ್ಷ್ಮಿ ಅರುಣ ಎದುರು ಬಹಳ ಅತರದಿಂದ ಗೆದ್ದಿದ್ದರು.
ಇಂದು ಬೆಳ್ಳಂಬೆಳಗ್ಗೆ ED ಅಧಿಕಾರಿಗಳು ದಾಳಿ ನಡೆಸಿ MLA ಭರತ್ ರೆಡ್ಡಿಗೆ ಬಿಗ್ ಶಾಕ್ ನೀಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಅಧಿಕಾರಿಗಳು ಭರತ್ ರೆಡ್ಡಿ ತಂದೆ ಆಫೀಸ್ನಲ್ಲೂ ಪರಿಶೀಲನೆ ಮಾಡಿದ್ದಾರೆ. ಇದರ ಜೊತೆಗೆ ಇನ್ನೂ ಹಲವೆಡೆ ಇಡಿ ದಾಳಿ ನಡೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ – ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು..!