ಬೀದರ್ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಮರ್ ಖಂಡ್ರೆ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪೊಲೀಸರ ತಂಡದೊಂದಿಗೆ ಆಗಮಿಸಿ ಬ್ಯಾಂಕ್ಗೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಧಿಕಾರಿಗಳ ತಂಡ ಬ್ಯಾಂಕ್ ಪ್ರವೇಶಿಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೀದರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಸುಮಾರು 15 ರಿಂದ 20 ಜನ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ. ಬಿಜಾಪುರ ಹಾಗೂ ಕಲಬುರಗಿ ರಾಯಚೂರಿನಿಂದ ಬಂದಿರುವ ಐಟಿ ಅಧಿಕಾರಿಗಳು ಬ್ಯಾಂಕ್ನ ಅಕೌಂಟ್ಸ್ಗಳನ್ನು ಪರಿಶೀನಲೆ ಮಾಡಿದ್ದಾರೆ.
ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ್ ಖಂಡ್ರೆ ಬೀದರ್ ಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್ನ ಎಲ್ಲ ಸಿಬ್ಬಂದಿಯ ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲಿಸಿದ್ದಾರೆ. ಡಿಸಿಸಿ ಬ್ಯಾಂಕ್ನ ಜನರಲ್ ಮ್ಯಾನೇಜರ್ ಸೇರಿ ಹಲವರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ.
ಇದನ್ನೂ ಓದಿ : ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಮನೆ ದೋಚಿದ್ದ ನಾಲ್ವರು ಅರೆಸ್ಟ್..!