ದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಭೇಟಿಯಾಗಿರುವ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲು ಬಿಜೆಪಿ ರಾಜ್ಯ ನಾಯಕರು ಹಾಗೂ ಹೈಕಮಾಂಡ್ ನಿರ್ಧರಿಸಿದೆ. ಅಲ್ಲದೆ, ಶೆಟ್ಟರ್ ಜೊತೆ ಮಾತುಕತೆ ನಡೆಸುವ ಹೊಣೆಗಾರಿಕೆಯನ್ನು ರಾಜ್ಯದ ನಾಯಕರು ವರಿಷ್ಠರ ಮೇಲೆ ಹಾಕಿದ್ದು, ಖುದ್ದು ಅಮಿತ್ ಶಾ ಅವರೇ ಅಖಾಡಕ್ಕಿಳಿದಿದ್ದಾರೆ. ಶೆಟ್ಟರ್ ಜೊತೆ ಬಿಜೆಪಿ ತೊರೆದು ಕಾಂಗ್ರೆಸ್ ಸೆರ್ಪಡೆಯಾಗಿ ಶಾಸಕರಾಗಿರುವ ಲಕ್ಷ್ಮಣ ಸವದಿ ಕೂಡ ಪಕ್ಷಕ್ಕೆ ವಾಪಸ್ ಆಗುವ ಲಕ್ಷಣಗಳು ಕಾಣುತ್ತಿವೆ.
ಅಮಿತ್ ಶಾ ನಿವಾಸಕ್ಕೆ ಜಗದೀಶ್ ಶೆಟ್ಟರ್ ರಾಜ್ಯ ನಾಯಕರ ಜತೆ ತೆರಳಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾಗಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಇದೀಗ ಬಿಜೆಪಿಗೆ ಶೆಟ್ಟರ್ ವಾಪಸ್ ಆಗೋದು ಬಹುತೇಕ ಫಿಕ್ಸ್ ಆಗಿದೆ. ಕೆಲ ಹೊತ್ತಿನಲ್ಲೇ ಅಮಿತ್ ಶಾರಿಂದ ಘೋಷಣೆ ಮಾಡಲಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲೇ ಅಧಿಕೃತ ಘೋಷಣೆ ಸಾಧ್ಯತೆಯಿದೆ. ನಾಳೆಯೇ MLC ಸ್ಥಾನಕ್ಕೆ ಶೆಟ್ಟರ್ ರಾಜೀನಾಮೆ ಸಾಧ್ಯತೆಯಿದೆ.
ಇದನ್ನೂ ಓದಿ : 80 ಸಾವಿರ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AE..!