ನವದೆಹಲಿ : ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ.
ಅದೇ ರೀತಿ ಹರಿಯಾಣದಲ್ಲಿ ಅಕ್ಟೋಬರ್ 1ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 4ರಂದು ಎರಡು ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಇನ್ನು ಕರ್ನಾಟಕಕ್ಕೆ ಇಂದು ಬೈ ಎಲೆಕ್ಷನ್ ಘೋಷಣೆ ಆಗಿಲ್ಲ. ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ ತುಕಾರಾಂ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಿಂದ ಚನ್ನಪ್ಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿತ್ತು. ಆದರೆ ಜಮ್ಮು-ಕಾಶ್ಮೀರ, ಹರಿಯಾಣಕ್ಕೆ ಮಾತ್ರ ಚುನಾವಣೆ ಆಯೋಗ ಡೇಟ್ ಅನೌನ್ಸ್ ಮಾಡಿದೆ.
ಇದನ್ನೂ ಓದಿ : ರಾಜ್ಯಕ್ಕೆ ಫಸ್ಟ್ ರ‍್ಯಾಂಕ್ ಬಂದ ವಿದ್ಯಾರ್ಥಿನಿಗೆ ಸ್ಕೂಟಿ–ಲಕ್ಷ ಕ್ಯಾಶ್ : ಸಚಿವ ಜಮೀರ್ ಬಂಪರ್ ಗಿಫ್ಟ್ ..!