Download Our App

Follow us

Home » ರಾಜಕೀಯ » ಸಿಎಂ ಸಿದ್ದು ಹಾಗೂ ಡಿಸಿಎಂ ಡಿಕೆಶಿಯನ್ನು ಭೇಟಿಯಾದ ಜನಾರ್ದನ ರೆಡ್ಡಿ – ಕುತೂಹಲ ಕೆರಳಿಸಿದ ಗಣಿ ಧಣಿ ನಡೆ..!

ಸಿಎಂ ಸಿದ್ದು ಹಾಗೂ ಡಿಸಿಎಂ ಡಿಕೆಶಿಯನ್ನು ಭೇಟಿಯಾದ ಜನಾರ್ದನ ರೆಡ್ಡಿ – ಕುತೂಹಲ ಕೆರಳಿಸಿದ ಗಣಿ ಧಣಿ ನಡೆ..!

ಬೆಂಗಳೂರು : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಜನಾರ್ದನ ರೆಡ್ಡಿ ಇಂದು ಬೆಳಗ್ಗೆ ಸಿಎಂ ನಿವಾಸ ಕಾವೇರಿಗೆ ತೆರಳಿ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಫೆ.27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಹೀಗಿರುವಾಗಲೇ ಜನಾರ್ದನ ರೆಡ್ಡಿಯವರ ಈ ಭೇಟಿ ಭಾರೀ ಕುತೂಹಲ ಮೂಡಿಸಿದೆ.

ರಾಜ್ಯಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಹಜವಾಗಿ ಈ ಭೇಟಿ ಬೇರೆ ಬೇರೆ ಆಯಾಮದ ಚರ್ಚೆಯ ಕಡೆಗೂ ದಾರಿ ಮಾಡಿಕೊಟ್ಟಿದೆ. ಮತ್ತೊಂದೆಡೆ ಆನೆಗುಂದಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲು ಭೇಟಿ ಮಾಡಿದ್ದಾರೆಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ : ಜ್ಞಾನವಾಪಿ ಪ್ರಕರಣ : ಮುಸ್ಲಿಂ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here