ಬೆಂಗಳೂರು : ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಕೆಕೆಪಿಆರ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಇಂದು ಮತ್ತೆ ಮಾತೃ ಪಕ್ಷ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಜನಾರ್ದನ ರೆಡ್ಡಿ ಸೇರ್ಪಡೆಗೆ ಬಿಜೆಪಿ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು, ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆ ಕುರಿತು ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಅಮಿತ್ ಶಾ ಅವರೇ ಹಸಿರುನಿಶಾನೆ ತೋರಿದ್ದು, ಯಾವುದೇ ಷರತ್ತುಗಳು ಇಲ್ಲದೆ ಪಕ್ಷದ ನಾಯಕತ್ವ ಮತ್ತು ಸಿದ್ದಾಂತಕ್ಕೆ ಬದ್ದವಾಗಿ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ ಎಂದು ಹೇಳಲಾಗಿದೆ.
ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಬೆಳಗ್ಗೆ 9ಗಂಟೆಗೆ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಇದನ್ನೂ ಓದಿ : ಬಿಜೆಪಿಯ 5ನೇ ಪಟ್ಟಿ ಬಿಡುಗಡೆ : ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ, ಅನಂತ್ಕುಮಾರ್ ಹೆಗಡೆಗೆ ಕೈತಪ್ಪಿದ ಟಿಕೆಟ್..!