Download Our App

Follow us

Home » ರಾಜಕೀಯ » ಲೋಕಸಭೆ ಚುನಾವಣೆ : ಮೂರು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಫಿಕ್ಸ್?

ಲೋಕಸಭೆ ಚುನಾವಣೆ : ಮೂರು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಫಿಕ್ಸ್?

ಬೆಂಗಳೂರು : ಲೋಕಸಭೆ ಚುನಾವಣೆಗೆ ಮೂರು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸುವುದು ಇದೀಗ ಫಿಕ್ಸ್ ಆಗಿದೆ. ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದ್ದು, ಈ ಮೂರು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಡಿಸೈಡ್​ ಮಾಡಿದ್ದಾರೆ.

ಇಂದು ನಡೆಯುವ ಸಭೆಯಲ್ಲಿ ಅಂತಿಮವಾಗಿ ನಿರ್ಧಾರ ಮಾಡುವ ಸಾಧ್ಯತೆಯಿದೆ. ದಳಪತಿಗಳು ಮತ್ತೊಂದು ಕ್ಷೇತ್ರ ಬಿಟ್ಟುಕೊಡಲು ಕೇಳ್ತಿದ್ದು, ಹೀಗಾಗಿ ಮೂರು ಕ್ಷೇತ್ರದಲ್ಲೂ ಗೆಲ್ಲಲು ದಳಪತಿಗಳು ಪ್ಲಾನ್​​​ ಮಾಡುತ್ತಿದ್ದಾರೆ.

ಇದೇ ತಿಂಗಳು ಬೃಹತ್​ ಸಮಾವೇಶ ಆಯೋಜಿಸಲು ಚಿಂತನೆ ನಡೆಸಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಸಮಾವೇಶ ನಡೆಸೋ ರಣತಂತ್ರ ರೂಪಿಸಿದ್ದಾರೆ. ಈ ವಾರದಲ್ಲೇ HDK ಜೊತೆ ಮತ್ತೆ ಚರ್ಚಿಸಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಗೆಯೇ ಮತ್ತೊಂದೆಡೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ನಿವಾಸದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಬಗ್ಗೆ ಬಿಜೆಪಿ, ಜೆಡಿಎಸ್​ ನಾಯಕರು ಚರ್ಚೆ ನಡೆಸಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರ ಸಭೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರ ನಿವಾಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೆಚ್​​ಡಿಕೆ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ನಡೆದಿದ್ದು, ಬಿಜೆಪಿ ಮಾಜಿ ಸಚಿವ ಸಿಪಿ ಯೋಗೇಶ್ವರ್, ಶಾಸಕರಾದ ಮುನಿರತ್ನ, ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಬಿಜೆಪಿ ಜೆಡಿಎಸ್ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

ಈ ಬಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಮೈತ್ರಿ ಪಕ್ಷಗಳು ತಂತ್ರ ನಡೆಸುತ್ತಿದೆ. ನಾಯಕರು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಚರ್ಚೆ ನಡೆದಿದ್ದು, ಸಿ.ಪಿ.ಯೋಗೇಶ್ವರ್​​ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಜೆಡಿಎಸ್​ಗೆ ಟಿಕೆಟ್​ ಕೊಡದೇ ಇದ್ರೆ ನನಗೆ ಸಹಕರಿಸಿ ಎಂದು ಯೋಗೇಶ್ವರ್​​ ಹೇಳುತ್ತಿದ್ದಾರೆ.

ಇದನ್ನೂ ಓದಿ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here