ಬೆಂಗಳೂರು : ಸಲಿಂಗ ಕಾಮ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜೈಲಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ 6141ನ್ನು ನೀಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಹಾಸನದ ಸಿಇಎನ್ ಠಾಣೆ ಪೊಲೀಸರು ಸೂರಜ್ ರೇವಣ್ಣನನ್ನು ಬಂಧಿಸಿದ್ದರು.
ಇನ್ನು ಈ ಕೇಸ್ ಸಂಬಂಧ ಸೂರಜ್ ರೇವಣ್ಣಗೆ ನಿನ್ನೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನ ಕ್ವಾರಂಟೈನ್ ಸೆಲ್ನಲ್ಲಿ ಸೂರಜ್ ರೇವಣ್ಣನನ್ನು ಇರಿಸಲಾಗಿದ್ದು, ಜೈಲಧಿಕಾರಿಗಳು ಸೂರಜ್ ಗೆ ವಿಚಾರಣಾಧೀನ ಕೈದಿ ನಂಬರ್ 6141 ಸಂಖ್ಯೆ ವಿತರಿಸಿದ್ದಾರೆ.
ಇದನ್ನೂ ಓದಿ : ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಇ-ಮೇಲ್ : ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡು..!
Post Views: 65