Download Our App

Follow us

Home » ಸಿನಿಮಾ » ‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್ – ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ..!

‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್ – ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾ..!

ದೊಡ್ಮನೆ ಕುಡಿ ವಿನಯ್ ರಾಜ್​​ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ವಿನಯ್ ರಾಜ್​​ಕುಮಾರ್ ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.

ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್ ಅಡಿ ಚಿತ್ರ ಹಾಡೊಂದನ್ನು ಅನಾವರಣ ಮಾಡಿದೆ. ಪಿಆರ್ ಕೆ ಆಡಿಯೋದಲ್ಲಿ ರಿಲೀಸ್ ಆಗಿರುವ ಗಾನಬಜಾನ ವಿಭಿನ್ನತೆಯಿಂದ ಕೂಡಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್ ಡಿಸೈನ್ ಬೇರೆ ರೀತಿ ಇದೆ ಅನ್ನೋದಕ್ಕೆ ಬಿಡುಗಡೆಯಾಗಿರುವ ಈ ಹಾಡು ಸೂಕ್ತ ಉದಾಹರಣೆ.

ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮೂಡಿ ಬರ್ತಿರುವ ಪೆಪೆ ಒಂದು ರೀತಿ ಪರಿಪೂರ್ಣ ವಿಭಿನ್ನ ಸಿನಿಮಾ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ : ಬಿಗ್‌ಬಾಸ್‌ ಕನ್ನಡದಿಂದ ಕಿಚ್ಚ ಸುದೀಪ್‌ ಔಟ್‌ – ಈ ಬಾರಿ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ..!

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here