ಬೆಂಗಳೂರು : ವಕೀಲೆ ಎಸ್. ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣವನ್ನು CBI ತನಿಖೆಗೆ ಆಗ್ರಹಿಸಿ ಹೈಕೋರ್ಟ್ಗೆ ವಕೀಲರ ಸಂಘ ಮನವಿ ಮಾಡಿದೆ.
ಇತ್ತೀಚಿಗೆ ಬೋವಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸಿದ್ದ 33 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ ಬರೆದಿಟ್ಟಿರುವ 13 ಪುಟಗಳ ಡೆತ್‌ನೋಟ್ ಪತ್ತೆಯಾಗಿತ್ತು.
ಈ ಡೆತ್ನೋಟ್ನಲ್ಲಿ, ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖಾಧಿಕಾರಿಗಳು ಹಲವು ಬಾರಿ ವಿಚಾರಣೆಗೆ ಕರೆಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ತನಿಖಾಧಿಕಾರಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್ ಜೀವಾ ಉಲ್ಲೇಖಿಸಿದ್ದರು. ಡೆತ್‌ನೋಟ್ ಹಾಗೂ ಜೀವಾ ಸಹೋದರಿ ಸಂಗೀತಾ ನೀಡಿದ ದೂರಿನ ಅನ್ವಯ DySP ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅನ್ವಯ FIR ದಾಖಲಾಗಿತ್ತು.
ಇದೀಗ ಜೀವಾ ಆತ್ಮಹತ್ಯೆ ಪ್ರಕರಣವನ್ನು CBI ತನಿಖೆಗೆ ಆಗ್ರಹಿಸಿ ಹೈಕೋರ್ಟ್ಗೆ ವಕೀಲರ ಸಂಘ ಮನವಿ ಮಾಡಿದೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಜೀವಾ ಆತ್ಮಹತ್ಯೆ ಕೇಸ್ CBIಗೆ ಹೋಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ಪರ್ತ್‌ನಲ್ಲಿ ಸ್ಪೋಟಕ ಶತಕ ಸಿಡಿಸಿದ ಕಿಂಗ್ ಕೊಹ್ಲಿ.. ‘ವಿರಾಟ’ರೂಪಕ್ಕೆ ಕಾಂಗರೂಗಳು ಶೇಕ್ ಶೇಕ್..!