Download Our App

Follow us

Home » ಮೆಟ್ರೋ » ‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಗಣೇಶ್ ಇನ್ನಿಲ್ಲ..!

‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಗಣೇಶ್ ಇನ್ನಿಲ್ಲ..!

ಬೆಂಗಳೂರು : ಕನ್ನಡ ಪತ್ರಿಕಾ ರಂಗದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಇಹಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಇತ್ತೀಚಿಗೆ ಅನಾರೋಗ್ಯದ ಹಿನ್ನೆಲೆ ನಗರದ ಮಹಾವೀರ್ ಜೈನ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಗಣೇಶ್ ಅವರು ಪ್ರೆಸ್​ಕ್ಲಬ್‌ನ ಖಜಾಂಚಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಇನ್ನು ಖಾಸಗಿ ಸುದ್ದಿವಾಹಿನಿಯಲ್ಲಿ ಔಟ್​ಪುಟ್ ಎಡಿಟರ್ ಆಗಿದ್ದರು.

ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದ ಗಣೇಶ್‌ ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌, ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಗಣೇಶ್​ ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ : ಉದ್ಯಮ ರತ್ನ ರತನ್ ಟಾಟಾ ಅಂತಿಮ ದರ್ಶನಕ್ಕೆ ವ್ಯವಸ್ಥೆ.. ಅಂತ್ಯಕ್ರಿಯೆ ಎಲ್ಲಿ ನಡೆಯುತ್ತೆ? ಇಲ್ಲಿದೆ ಮಾಹಿತಿ..!

Leave a Comment

DG Ad

RELATED LATEST NEWS

Top Headlines

ಸೆಟ್ಟೇರಿದ ಮಹೇಶ್ ಚಿನ್ಮಯಿ ನಿರ್ದೇಶನದ ‘ಗೌರಿಶಂಕರ’ ಸಿನಿಮಾ..!

ಮಹೇಶ್ ಚಿನ್ಮಯಿ ನಿರ್ದೇಶನದ ’ಗೌರಿಶಂಕರ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ನಿರ್ಮಾಪಕ ರಾಜಣ್ಣ ಕ್ಯಾಮಾರ ಆನ್ ಮಾಡಿದರೆ, ಶಿವಲಿಂಗ

Live Cricket

Add Your Heading Text Here