ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯ ಬಿಜೆಪಿ ಗೊಂದಲಕ್ಕೆ ವರಿಷ್ಠರು ಸರ್ಜರಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಣ ರಾಜಕೀಯ, ಭಿನ್ನಮತ ಚಟುವಟಿಕೆಗಳ ಮಧ್ಯೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಜೆ.ಪಿ.ನಡ್ಡಾ ಅವರು ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕಾಗಿ ಬಂದಿದ್ದು, ಕಾರ್ಯಕ್ರಮ ಮುಗಿದ ಬಳಿಕ ಬಿಜೆಪಿ ನಾಯಕರ ಜೊತೆ ಕುಮಾರಕೃಪಾದಲ್ಲಿ 2 ಗಂಟೆಗಳ ಕಾಲ ಸಭೆ ನಡೆಸಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ಜೊತೆ ನಡ್ಡಾ ಅವರು ಚರ್ಚೆ ನಡೆಸಿ ಪ್ರತ್ಯೇಕವಾಗಿ ಹಲವು ಮುಖಂಡರ ಅಭಿಪ್ರಾಯ ಕೇಳಲಿದ್ದಾರೆ. ಮೊನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಯತ್ನಾಳ್ ಟೀಂ ವಿರುದ್ಧ ದೂರು ನೀಡಿದ್ದರು.
ಇನ್ನು ನಡ್ಡಾ ದೆಹಲಿಗೆ ಹೋದ್ಮೇಲೆ ರಾಜ್ಯ ಲೀಡರ್ಶಿಪ್ ಬಗ್ಗೆ ಕ್ಲಿಯರ್ ಪಿಕ್ಚರ್ ಸಿಗಲಿದೆ. ನಿನ್ನೆ ರಾತ್ರಿ ಬೆಂಗಳೂರಿಗೆ ಬಂದಿಳಿದ ಜೆ.ಪಿ.ನಡ್ಡಾ ಅವರನ್ನು ವಿಜಯೇಂದ್ರ, ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಸೇರಿದಂತೆ ಬಿಜೆಪಿ ನಾಯಕರು ಬರಮಾಡಿಕೊಂಡರು. ಬಳಿಕ ಅವರೊಟ್ಟಿಗೆ ಕಾರಿನಲ್ಲಿ ಪ್ರಯಾಣಿಸಿ, ಸುಮಾರು ಗಂಟೆಗಳ ಕಾಲ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಮೈಮೇಲೆ ಓತಿಕ್ಯಾತ ಬಿಟ್ಕೊಂಡ ನಿವಿ.. ‘ಆ ವ್ಯಕ್ತಿಗಿಂತ ಇದು ಡೇಂಜರ್ ಅಲ್ಲ’ ಎಂದು ಟಾಂಗ್ ಕೊಟ್ಟಿದ್ದು ಯಾರಿಗೆ?