ಬೆಂಗಳೂರು : ಸಲಿಂಗಕಾಮ ಪ್ರಕರಣ ಸಂಬಂಧವಾಗಿ ಜೆಡಿಎಸ್ MLC ಸೂರಜ್ ರೇವಣ್ಣಗೆ ಕೋರ್ಟ್ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಕಸ್ಟಡಿ ಅಂತ್ಯ ಹಿನ್ನೆಲೆ ಸೂರಜ್ನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
ಸಲಿಂಗಕಾಮ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಬಳಿಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅದರಂತೆ ಇಂದು ಕಸ್ಟಡಿ ಮುಗಿದಿದ್ದರಿಂದ ಸೂರಜ್ನನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈಗಾಗಲೇ ಅವರ ಸಹೋದರ ಪ್ರಜ್ವಲ್ ಕೂಡ ಇದೇ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ : ಭ್ರಷ್ಟಾಚಾರ ಮಟ್ಟ ಹಾಕಲೆಂದೇ ಬಂದಿದ್ದೇನೆ : ರಾಜ್ಯಸಭೆಯಲ್ಲಿ ಅಬ್ಬರಿಸಿದ ಪ್ರಧಾನಿ ಮೋದಿ..!