Download Our App

Follow us

Home » ಅಂತಾರಾಷ್ಟ್ರೀಯ » ಕೆನಡಾ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ..!

ಕೆನಡಾ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ..!

ಒಟ್ಟಾವೊ : ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರಡೊ, ಈ ಎರಡೂ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ.

“ಪಕ್ಷವು ತನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ. ಲಿಬರಲ್ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪ್ರಕ್ರಿಯೆ ಆರಂಭಿಸುವಂತೆ ಕೇಳಿಕೊಂಡಿದ್ದೇನೆ” ಎಂದು ಜಸ್ಟಿನ್ ಟ್ರುಡೊ ಹೇಳಿದ್ದಾರೆ.

ಟ್ರುಡೊ ಅವರು ತಮ್ಮ ಲಿಬರಲ್ ಪಕ್ಷದೊಳಗೆ ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತಿರುವ ಕಾರಣ ರಾಜೀನಾಮೆ ನೀಡಿದ್ದು, ಕಳೆದ ಒಂದು ತಿಂಗಳಿನಿಂದ ಟ್ರುಡೊ ನೇತೃತ್ವದ ಲಿಬರಲ್‌ ಪಕ್ಷದ ಸರ್ಕಾರದಲ್ಲಿ ಆಂತರಿಕ ಕಲಹ ಉಂಟಾಗಿದೆ. ಟ್ರುಡೊ ನಾಯಕತ್ವದ ವಿರುದ್ದ ಅವರ ಪಕ್ಷದ ಸಂಸದರೇ ಅಪಸ್ವರ ಎತ್ತಿದ್ದಾರೆ.

ಇನ್ನು ಖಲಿಸ್ತಾನ್ ಪ್ರತ್ಯೇಕವಾದಿಗಳ ವಿಚಾರದಲ್ಲೂ ಟ್ರುಡೊ ನಾಯಕತ್ವ ಮತ್ತು ಭಾರತದ ನಡುವೆ ಸಂಬಂಧ ಹಳಸಿದೆ. ಟ್ರುಡೊ ಸರ್ಕಾರ ಕೆನಡಾದಲ್ಲಿರುವ ಖಲಿಸ್ತಾನಿಗಳ ಪರ ಹೇಳಿಕೆ ನೀಡುತ್ತಿರುವುದನ್ನು ಭಾರತ ಖಂಡಿಸಿದೆ.

ಇದನ್ನೂ ಓದಿ : ಮಾ.1ರಿಂದ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ‘ಸರ್ವ ಜನಾಂಗದ ಶಾಂತಿಯ ತೋಟ’ ಈ ಬಾರಿಯ ಥೀಮ್..!

Leave a Comment

DG Ad

RELATED LATEST NEWS

Top Headlines

6 ಮಕ್ಕಳ ತಾಯಿಗೆ ಬಿಕ್ಷುಕನ ಮೇಲೆ ಪ್ರೇಮಾಂಕುರ – ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿ..!

ಗಂಡ ಮತ್ತು 6 ಮಕ್ಕಳೊಂದಿಗೆ ಸಂಸಾರ ಮಾಡುತ್ತಿದ್ದ ತಾಯಿಯೊಬ್ಬಳು ಭಿಕ್ಷುಕನೊಂದಿಗೆ ಪರಾರಿಯಾದ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 36 ವರ್ಷದ ಮಹಿಳೆ ರಾಜೇಶ್ವರಿ

Live Cricket

Add Your Heading Text Here