ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಏರುತ್ತಿದ್ದು, ವಿವಿಧ ಪಕ್ಷಗಳನ್ನು ಸೇರುವ ನಾಯಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಿರುವಾಗ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂದು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ.
ನಿವೃತ್ತ ಐಪಿಎಸ್ ಅಧಿಕಾರಿ ಬಿ.ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಇಂದು ಜೆಡಿಎಸ್ ಪಕ್ಷ ಸೇರಿದ್ದಾರೆ. ಪಕ್ಷದ ಧ್ವಜ ನೀಡಿ ಕುಮಾರಸ್ವಾಮಿಯವರು ಪಕ್ಷಕ್ಕೆ ಇವರನ್ನು ಸ್ವಾಗತಿಸಿದ್ದಾರೆ.
ಇಂದು ಜ್ಯೋತಿ ಪ್ರಕಾಶ್ ಮಿರ್ಜಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಚಿವ ಅನಿಲ್ ಲಾಡ್ ಮುಂತಾದವರು ಉಪಸ್ಥಿತರಿದ್ದರು.
ಜ್ಯೋತಿ ಪ್ರಕಾಶ್ ಮಿರ್ಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ.ಜಿ. ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದರು.
ಇದನ್ನೂ ಓದಿ : ಆಂಗ್ಲರ ವಿರುದ್ಧ ಭಾರತಕ್ಕೆ 106 ರನ್‌ಗಳ ಭರ್ಜರಿ ಜಯ – WTC ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿತ..!