ಕಲಬುರಗಿ : ಕಲ್ಲಿನ ಪರ್ಸಿ ತುಂಬಿಕೊಂಡು ಹೋಗ್ತಿದ್ದ ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ 12 ಜನರು ಗಂಭೀರ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮಿರಿಯಾಣ ಬಳಿ ನಡೆದಿದೆ.
ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಲಾರಿಯಲ್ಲಿ ಕಲ್ಲು ಕ್ವಾರಿಯಲ್ಲಿ ಕೂಲಿ ಕೆಲಸ ಮಾಡಲು ಕಾಮಿರ್ಕರು ತೆರಳಿದ್ದರು. ಕೆಲಸ ಮುಗಿಸಿ ವಾಪಸ್ ಬರೋವಾಗ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ.
ಘಟನೆಯ ಪರಿಣಾಮ ಪರ್ಸಿ ತುಂಬಿದ ಲಾರಿ ಅಡಿಯಲ್ಲಿ ಸಿಲುಕಿ ಹಲವರ ಕೈಕಾಲು, ಸೊಂಟ ಮುರಿತಗೊಂಡಿದೆ. ಇನ್ನು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿ ಟ್ರಾಮ ಕೆರ್ ಸೆಂಟರ್‌ಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉಡುಪಿ : ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್ ಕೇಸ್ – ಇಬ್ಬರು ಅರೆಸ್ಟ್ ..!
Post Views: 104