ಕಲಬುರುಗಿ : ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ್ ಹಿಂತಿರುಗುತ್ತಿರುವಾಗ ಸ್ವಿಫ್ಟ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಲಬುರುಗಿಯ ಶಹಬಾದ್ ತಾಲೂಕಿನ ಭಂಕೂರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಉತ್ತರಪ್ರದೇಶ ಮೂಲದ ಬಟ್ಟೆ ವ್ಯಾಪಾರಿಗಳಾಗಿದ್ದಾರೆ. 30 ವರ್ಷದ ಜಾಹೀದ್ ಪಠಾಣ್, 20 ವರ್ಷದ ಶಾಕೀರ್ ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬಟ್ಟೆ ವ್ಯಾಪರಿಗಳು ವ್ಯಾಪರ ಮುಗಿಸಿಕೊಂಡು ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದರು. ಈ ವೇಳೆ ಭಂಕೂರ ಗ್ರಾಮ ಬಳಿ ಬರುತ್ತಿದ್ದಂತೆ ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಭೀಕರವಾದ ಅಪಘಾತ ಸಂಭವಿಸಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ‘ಜಾಕಿ’ ಚಿತ್ರ..!