Download Our App

Follow us

Home » ಸಿನಿಮಾ » ವಿಕ್ಕಿ ವರುಣ್-ಧನ್ಯಾ ರಾಮ್​​ಕುಮಾರ್ ನಟನೆಯ “ಕಾಲಾಪತ್ಥರ್” ಚಿತ್ರದ ಟ್ರೇಲರ್ ರಿಲೀಸ್​..!

ವಿಕ್ಕಿ ವರುಣ್-ಧನ್ಯಾ ರಾಮ್​​ಕುಮಾರ್ ನಟನೆಯ “ಕಾಲಾಪತ್ಥರ್” ಚಿತ್ರದ ಟ್ರೇಲರ್ ರಿಲೀಸ್​..!

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜ್​ಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದ್ದಾರೆ.

ಇನ್ನು ಚಿತ್ರದ ನಾಯಕ ವಿಕ್ಕಿ ವರುಣ್ ಮಾತನಾಡಿ, ನಾನು ನಟ ಆಗಬೇಕೆಂದುಕೊಂಡವನಲ್ಲ. ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದವನು. ದುನಿಯಾ ಸೂರಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡಿದ್ದೇ‌ನೆ.‌ ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು “ಕಡ್ಡಿಪುಡಿ” ಚಿತ್ರದ ಸಮಯದಲ್ಲಿ ಶಿವಣ್ಣ ಅವರು ಮಾತಾನಾಡಿಸಿದ್ದು ಹಾಗೂ ಅವರ ಜೊತೆ ಒಂದು ದೃಶ್ಯದಲ್ಲಿ ಅಭಿನಯಿಸಿದ್ದು ಮರೆಯಲಾಗದ ಕ್ಷಣ. ಇಂದು ಅವರೆ ನನ‌್ನ ನಿರ್ದೇಶನದ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ಮತ್ತಷ್ಟು ಸಂತೋಷವಾಗಿದೆ. ಅವಕಾಶ ಕೊಟ್ಟ ನಿರ್ಮಾಪಕರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ ಹೇಳುತ್ತೇನೆ. ಸೆಪ್ಟೆಂಬರ್ 13 ರಂದು ಚಿತ್ರ ಬಿಡುಗಡೆಯಾಗುತ್ತಿದೆ ನೋಡಿ ಪ್ರೋತ್ಸಾಹಿಸಿ ಎಂದು ನಟ ವಿಕ್ಕಿ ವರುಣ್ ಹೇಳಿದ್ದಾರೆ.

ಶಿವಣ್ಣ ಮಾವ ಟ್ರೇಲರ್ ಬಿಡುಗಡೆ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದಾರೆ. ವಿನಯ್ ರಾಜಕುಮಾರ್ ಸಹ ಬಂದಿದ್ದಾರೆ‌. ಮೊದಲಿನಿಂದಲೂ ನನ್ನ ಕುಟುಂಬ ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಈ ಚಿತ್ರದಲ್ಲಿ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರ ಎಂದು ಧನ್ಯ ರಾಮಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ರಾಜೇಶ್ ನಟರಂಗ, ಚಕ್ರವರ್ತಿ ಚಂದ್ರಚೂಡ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕರಾದ ಭುವನ್ ಸುರೇಶ್, ನಾಗರಾಜ್ ಬಿಲ್ಲನಕೋಟೆ ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು.

ಇದನ್ನೂ ಓದಿ : ರೇಣುಕಾಸ್ವಾಮಿ ಶುಭಾ ಪೂಂಜಾಗೂ ಅಶ್ಲೀಲವಾಗಿ ಮೆಸೇಜ್ ಮಾಡಿದ್ರಾ? – ನಟಿ ಹೇಳಿದ್ದೇನು

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here