ಕಲಬುರಗಿ : ತಾಯಿ ನಮ್ಮ ಅತ್ತೆ ಬೇಗ ಸಾಯಬೇಕು ಅಂತಾ ನೋಟ್ ಮೇಲೆ ಬರೆದು ಹುಂಡಿಗೆ ಕಾಣಿಕೆ ಹಾಕಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಈ ಲೆಟರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರದ ಸುಕ್ಷೇತ್ರ ಘತ್ತರ್ಗಿ ಭಾಗ್ಯವಂತಿ ದೇವಸ್ಥಾನದ ಹುಂಡಿಯಲ್ಲಿ ಈ ನೋಟ್ ಪತ್ತೆಯಾಗಿದ್ದು, ಕಳೆದ ಕೆಲ ತಿಂಗಳ ಹಿಂದೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಮಹಿಳೆ 20 ರೂ. ನೋಟ್ ಮೇಲೆ ಅತ್ತೆ ಸಾಯಲೆಂದು ಬರೆದು ಭಾಗ್ಯವಂತಿ ದೇವಿಯ ಹುಂಡಿಗೆ ಹರಕೆ ಹಾಕಿದ್ದಾರೆ.
ನಿನ್ನೆ ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಮಾಡುವ ವೇಳೆ ಅತ್ತೆ ಸಾಯಲೆಂದು ಹರಕೆ ಹೊತ್ತು ಕಾಣಿಕೆ ಅರ್ಪಿಸಿರುವ ನೋಟ್ ಪತ್ತೆಯಾಗಿದೆ. ಸದ್ಯ ಈ ಲೆಟರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪತ್ರ ಬರೆದ ಸೊಸೆ ಯಾರು ಅಂತ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ : ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಬಸ್ – 8 ಮಂದಿ ಸಾವು..!
Post Views: 11