Download Our App

Follow us

Home » ಸಿನಿಮಾ » ಕಮಲ್ ಹಾಸನ್ ಅಭಿನಯದ “ಇಂಡಿಯನ್-2” ಸಿನಿಮಾ ಜೂನ್​ನಲ್ಲಿ ತೆರೆಗೆ..!

ಕಮಲ್ ಹಾಸನ್ ಅಭಿನಯದ “ಇಂಡಿಯನ್-2” ಸಿನಿಮಾ ಜೂನ್​ನಲ್ಲಿ ತೆರೆಗೆ..!

ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ.

ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಎಸ್. ಶಂಕರ್ ನಿರ್ದೇಶನದಲ್ಲಿ ಇಂಡಿಯಾ 2 ಸಿನಿಮಾ ಮೂಡಿ ಬರುತ್ತಿದ್ದು, ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ : ನಿರ್ಮಾಪಕ ಸೌಂದರ್ಯ ಜಗದೀಶ್ ಆ*ತ್ಮಹತ್ಯೆ ಕೇಸ್ : ಸಾಲದ ಸುಳಿಯಲ್ಲಿ ಸಿಲುಕಿದ್ರಾ ಜಗದೀಶ್?

Leave a Comment

RELATED LATEST NEWS

Top Headlines

Live Cricket

Add Your Heading Text Here