Download Our App

Follow us

Home » ರಾಜಕೀಯ » ಶೇ.60 ರಷ್ಟು ಕನ್ನಡ ಬೋರ್ಡ್ ​ಅಳವಡಿಕೆ ಕಡ್ಡಾಯಕ್ಕೆ 2 ವಾರ ಗಡುವು ವಿಸ್ತರಣೆ..!

ಶೇ.60 ರಷ್ಟು ಕನ್ನಡ ಬೋರ್ಡ್ ​ಅಳವಡಿಕೆ ಕಡ್ಡಾಯಕ್ಕೆ 2 ವಾರ ಗಡುವು ವಿಸ್ತರಣೆ..!

ಬೆಂಗಳೂರು : ಬೆಂಗಳೂರಿನಲ್ಲಿ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದರು.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಲು ಅಖಾಡಕ್ಕೆ ಧುಮುಕಿದ ಎಸ್.ಆರ್ ವಿಶ್ವನಾಥ್..!

Leave a Comment

DG Ad

RELATED LATEST NEWS

Top Headlines

ತಿಮ್ಮಪ್ಪನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದಾಗ ಕಾರಿನ ಮೇಲೆ ಉರುಳಿ ಬಿದ್ದ ಟ್ರಕ್ – ಚಿಕ್ಕಬಳ್ಳಾಪುರದ ಮೂವರು ಸಾವು..!

ಚಿಕ್ಕಬಳ್ಳಾಪುರ : ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ವಾಪಸ್ ಆಗುವ ವೇಳೆ ಕಾರಿನ ಮೇಲೆ ಟ್ರಕ್ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಚಿಕ್ಕಬಳ್ಳಾಪುರದ ಮೂವರು ಸ್ಥಳದಲ್ಲೇ

Live Cricket

Add Your Heading Text Here