Download Our App

Follow us

Home » ಸಿನಿಮಾ » ‘ಕಾಂತಾರ’ ಪ್ರೀಕ್ವೇಲ್‌ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.NTR?

‘ಕಾಂತಾರ’ ಪ್ರೀಕ್ವೇಲ್‌ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.NTR?

ನಟ ರಿಷಬ್ ಶೆಟ್ಟಿ ಅವರು ಕಾಂತಾರ ಸಿನಿಮಾ ಮಾಡಿ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ಕಾಂತಾರ ಪಾರ್ಟ್ 1ಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದೀಗ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ.

 

ರಿಷಬ್ ಶೆಟ್ಟಿ ಸೈಲೆಂಟಾಗಿದ್ದಾರೆ. ಕಾರಣ ಕರಾವಳಿಯಲ್ಲಿ ‘ಕಾಂತಾರ’ ಚಿತ್ರೀಕರಣ ನಡೆಯುತ್ತಿದೆ. ಹಾಗಾಗಿ ಕಾಣಿಸುತ್ತಿಲ್ಲ ಶಿವ. ಆದರೆ ಮೊನ್ನೆ ಅವರು ಜ್ಯೂ.ಎನ್‌ಟಿಆರ್ ಜೊತೆ ದಿಢೀರ್ ಎಂದು ಪೋಸ್ ಕೊಟ್ಟರು. ಅಲ್ಲಿಂದ ಆರಂಭ ತಲೆಗೊಂದು ಲೆಕ್ಕಾಚಾರ. ಹಾಗಾಗಿ ರಿಷಬ್ ಜೊತೆ ತಾರಕ್ ನಟಿಸುತ್ತಾರೆ ಎಂಬ ಗುಸು ಗುಸು ಶುರುವಾಗಿದೆ.

ರಿಷಬ್ ಶೆಟ್ಟಿ ಈಗ ಎಲ್ಲೂ ಕಾಣುತ್ತಿಲ್ಲ. ಅದನ್ನು ಅವರೇ ಹೇಳಿದ್ದರು. ಶೂಟಿಂಗ್ ಆರಂಭವಾದ ಮೇಲೆ ನಾಟ್ ರಿಚೇಬಲ್ ಎಂದಿದ್ದರು. ಅದನ್ನು ಮಾಡಿ ತೋರಿಸುತ್ತಿದ್ದಾರೆ. ಈ ನಡುವೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು.

ಆಗ ಆಕಾಶಕ್ಕೇರಿದ ಗಾಳಿಪಟದ ಹಾರಾಟ ಈಗಲೂ ನಿಂತಿಲ್ಲ. ಇದರ ಪರಿಣಾಮ, ಕಾಂತಾರದಲ್ಲಿ ಜ್ಯೂ.ನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಕಾಣಿಸಲಿದ್ದಾರೆ. ಇದು ನಿಜವಾ ಸುಳ್ಳಾ? ಗೊತ್ತಿಲ್ಲ. ಈ ಸುದ್ದಿ ಮಾತ್ರ ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.

ಜ್ಯೂ.ಎನ್‌ಟಿಆರ್ ತಾಯಿ ಮೂಲತಃ ಮಂಗಳೂರಿನವರು. ಅದರಲ್ಲೂ ರಿಷಬ್ ಕುಂದಾಪುರದವರು. ಹೀಗಾಗಿಯೇ ತಾರಕ್ ಸ್ಪಷ್ಟ ಕನ್ನಡ ಮಾತಾಡುತ್ತಾರೆ. ಅದನ್ನಿಟ್ಟುಕೊಂಡು ಕಾಡುಶಿವ ಹಾಗೂ ಟೈಗರ್ ಜುಗಲ್‌ಬಂದಿ ತೋರಿಸಲಿದ್ದಾರೆ ಅನ್ನೋದು ಸದ್ಯದ ತಾಜಾ ಸುದ್ದಿ. ಕಾಂತಾರ ಮುಗಿವಷ್ಟರಲ್ಲಿ ಇನ್ನು ಯಾರ‍್ಯಾರು ಇದರಲ್ಲಿ ನಾಮಕಾವಾಸ್ತೆ ಸೇರಲಿದ್ದಾರೊ.

ಖುದ್ದು ಕಾಡು ಶಿವನಿಗೂ ಗೊತ್ತಿಲ್ಲ. ಸದ್ಯ ಬ್ರೇಕಿಂಗ್ ನ್ಯೂಸ್ ಆಗಿ ಹರಿದಾಡುತ್ತಿದೆ. ಜ್ಯೂ.ಎನ್‌ಟಿಆರ್ ಕಾಂತಾರ ಸಿನಿಮಾದಲ್ಲಿ ನಟಿಸೋದು ಗಾಸಿಪ್ ಅಥವಾ ನಿಜ ಸಂಗತಿನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ, ಈ ಸುದ್ದಿ ನಿಜವೇ ಆಗಿದಲ್ಲಿ ಪ್ರೇಕ್ಷಕರಿಗೆ ಹಬ್ಬದೂಟ ಗ್ಯಾರಂಟಿ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ NIA..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here