Download Our App

Follow us

Home » ರಾಜ್ಯ » ಇಂದು ಕರುನಾಡಲ್ಲಿ ಕರವೇ ಕಹಳೆ – ಕನ್ನಡಿಗರಿಗೆ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ..!

ಇಂದು ಕರುನಾಡಲ್ಲಿ ಕರವೇ ಕಹಳೆ – ಕನ್ನಡಿಗರಿಗೆ ಉದ್ಯೋಗಕ್ಕಾಗಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ..!

ಬೆಂಗಳೂರು : ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು‌ ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಸೇರಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ.

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್​ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ಕರವೇ ಬೇಡಿಕೆಗಳೇನು?

1. ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ನೀತಿ ರೂಪಿಸಿ
2. ಈ ಕಾನೂನು ಮೂಲಕ ಕನ್ನಡಿಗರಿಗೆ ಉದ್ಯೋಗ ಮೀಸಲು ಕೊಡಬೇಕು
3. ಖಾಸಗಿ ಸಂಸ್ಥೆಗಳ C-D ದರ್ಜೆ ಹುದ್ದೆ ಶೇ.100ರಷ್ಟು ಕನ್ನಡಿಗರಿಗೆ ಕೊಡ್ಬೇಕು
4. ರಾಜ್ಯ ಸರ್ಕಾರಿ ಸಂಸ್ಥೆ, ಸಾರ್ವಜನಿಕ ವಲಯದ ಶೇ.100ರಷ್ಟು ಉದ್ಯೋಗ ಕನ್ನಡಿಗರಿಗೆ
5. ಕೇಂದ್ರ ಸರ್ಕಾರಿ, ಸಾರ್ವಜನಿಕ ವಲಯದಲ್ಲಿ ಗ್ರೂಪ್ C, D ಹುದ್ದೆ ಕನ್ನಡಿಗರಿಗೆ ಕೊಡ್ಬೇಕು
6. ಎಲ್ಲಾ ಖಾಸಗಿ ಸಂಸ್ಥೆ,ಇತರೆ ಹುದ್ದೆಗಳಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಮೀಸಲು
7. ನಿಯಮ ಪಾಲಿಸದ ಸಂಸ್ಥೆಗಳ ಮಾನ್ಯತೆ ರದ್ದು, ಭೂಮಿ ವಾಪಸ್​ ಪಡೆಯಬೇಕು
8. ಆ ಸಂಸ್ಥೆಗೆ ನೀಡಿರುವ ಎಲ್ಲಾ ಸರ್ಕಾರಿ ಸವಲತ್ತು ಹಿಂದಕ್ಕೆ ಪಡೆಯಬೇಕು
9. ಕನ್ನಡಿಗರಿಗೆ ಉದ್ಯೋಗ ಮೀಸಲು ಕೊಡಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ
10. ರಾಜ್ಯ ಸರ್ಕಾರ ತರುವ ಕಾನೂನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಜಾರಿ ಮಾಡ್ಬೇಕು

ಇದನ್ನೂ ಓದಿ : ‘ದಿ ಬೆಂಗಳೂರು ಸಿಟಿ ಇನ್‌ಸ್ಟಿಟ್ಯೂಟ್’ನ ಅಧ್ಯಕ್ಷರಾಗಿ ಸುಕುಮಾರ್​​​​ ಕುನ ಆಯ್ಕೆ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here