ಬೆಂಗಳೂರು : ಕನ್ನಡ ಬೋರ್ಡ್ ಪ್ರಕರಣದಲ್ಲಿ ರಿಲೀಸ್ ಆದ ಬೆನ್ನಲ್ಲೇ ಕರವೇ ನಾರಾಯಣಗೌಡರನ್ನು ಮತ್ತೊಂದು ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದಿದ್ದಾರೆ.
ನಾರಾಯಣಗೌಡರು ಕನ್ನಡ ಬೋರ್ಡ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಶನಿವಾರ ನಾರಾಯಣಗೌಡರಿಗೆ ಬೇಲ್ ಮಂಜೂರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ನಾರಾಯಣ ಗೌಡ ಬಿಡುಗಡೆಯಾಗಿದ್ದರು.
2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರದ ಬಳಿ 40ಕ್ಕೂ ಹೆಚ್ಚು ಸಿಬ್ಬಂದಿ ಮತ್ತು 4 ಕೆಎಸ್‌ಆರ್‌ಪಿ ಪಡೆಯನ್ನು ನಿಯೋಜನೆ ಮಾಡುವ ಮೂಲಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶನಿವಾರ ನಾರಾಯಣಗೌಡ ಸೇರಿ 28 ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾ ಶಾಕ್..