Download Our App

Follow us

Home » ಅಪರಾಧ » ರಿಲೀಸ್​ ಬೆನ್ನಲ್ಲೇ ಕರವೇ ನಾರಾಯಣಗೌಡರು ಅರೆಸ್ಟ್..

ರಿಲೀಸ್​ ಬೆನ್ನಲ್ಲೇ ಕರವೇ ನಾರಾಯಣಗೌಡರು ಅರೆಸ್ಟ್..

ಬೆಂಗಳೂರು : ಕನ್ನಡ ಬೋರ್ಡ್​ ಪ್ರಕರಣದಲ್ಲಿ ರಿಲೀಸ್​ ಆದ ಬೆನ್ನಲ್ಲೇ ಕರವೇ ನಾರಾಯಣಗೌಡರನ್ನು ಮತ್ತೊಂದು ಪ್ರಕರಣದಲ್ಲಿ ಅರೆಸ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದಿದ್ದಾರೆ.

Karave Protest: ಕರವೇ ನಾರಾಯಣಗೌಡರು ಸೇರಿ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು Vistara News

ನಾರಾಯಣಗೌಡರು ಕನ್ನಡ ಬೋರ್ಡ್​ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಶನಿವಾರ ನಾರಾಯಣಗೌಡರಿಗೆ ಬೇಲ್​ ಮಂಜೂರಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ನಾರಾಯಣ ಗೌಡ ಬಿಡುಗಡೆಯಾಗಿದ್ದರು.

2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ  ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ನಾರಾಯಣಗೌಡರನ್ನು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರದ ಬಳಿ 40ಕ್ಕೂ ಹೆಚ್ಚು ಸಿಬ್ಬಂದಿ ಮತ್ತು 4 ಕೆಎಸ್‌ಆರ್‌ಪಿ ಪಡೆಯನ್ನು ನಿಯೋಜನೆ ಮಾಡುವ ಮೂಲಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶನಿವಾರ ನಾರಾಯಣಗೌಡ ಸೇರಿ 28 ಮಂದಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾ ಶಾಕ್​​​..

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here