ಉಡುಪಿ : ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸೋಮವಾರ ಮೊದಲ ಆರೋಪಿ ಅಲ್ತಾಫ್ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು ತಿಳಿಸಿದ್ದಾರೆ.
ಈಗ ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸುತ್ತೇನೆ. ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ರೀತಿಯಲ್ಲಿ NDPS ಪ್ರಕರಣದಲ್ಲಿ ಅಭಯ್ನನ್ನು ಬಂಧಿಸಲಾಗಿದೆ. ಅಲ್ಲದೆ ಇನ್ನು ಎರಡು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : ಹಾವೇರಿಯಲ್ಲಿ ಕಳ್ಳತನದ ಆರೋಪಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!
Post Views: 56