ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಲಾರಿ ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಭಾಗದಿಂದ ಹೊನ್ನಾವರ ಕಡೆ ಬರುತಿತ್ತು. ಅತಿ ವೇಗದ ಚಾಲನೆಯೇ ಲಾರಿ ಪಲ್ಟಿಯಾಗಲು ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರದವರು ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮೈ ಕೊರೆಯುವ ಕೂಲ್ ಲೆಕ್ಕಿಸದೇ ಹೊರಗೆ ಹೋಗ್ತಿರಾ ಹುಷಾರ್ – ಚಳಿಯ ತೀವ್ರತೆಗೆ ಇಡೀ ಕುಟುಂಬವೇ ಬಲಿ!
Post Views: 62